ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಲೇ-ಆಫ್ಗಾಗಿ ಐಪಿಎಲ್ ತಂಡಗಳ ಹೋರಾಟ ತೀವ್ರಗೊಂಡಿದೆ. ಜೈಪುರದಲ್ಲಿ ಇಂದು ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 10 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಮೊದಲು ಬ್ಯಾಟ್ ಮಾಡಿದ್ದ ಪಂಜಾಬ್ ಕಿಂಗ್ಸ್ ಐದು ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿತು. 220 ರನ್ಗಳ ಗುರಿಯನ್ನ ಬೆನ್ನಟ್ಟಿ ಬ್ಯಾಟಿಂಗ್ಗೆ ಬಂದ ರಾಜಸ್ಥಾನ್ ರಾಯಲ್ಸ್ ಆರಂಭದಲ್ಲಿ ಗೆಲ್ಲುವ ಉತ್ಸಾಹ ತೋರಿಸಿತು. ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಆದರು ನಂತರ ಬಂದ ಬ್ಯಾಟ್ಸ್ಮನ್ಗಳು ರನ್ಗಳಿಸುವಲ್ಲಿ ವಿಫಲರಾದರು. ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್, 7 ವಿಕೆಟ್ ಕಳೆದುಕೊಂಡು 209 ರನ್ಗಳಿಸಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿತು.
ಒಟ್ಟು 12 ಪಂದ್ಯಗಳನ್ನು ಆಡಿರುವ ಪಂಜಾಬ್ 8 ಪಂದ್ಯಗಳನ್ನು ಗೆದ್ದು ನೆಟ್ ರನ್ ರೇಟ್ ಆಧಾರದ ಮೇಲೆ 17 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೇರಿದೆ. ಇನ್ನು ಪಂಜಾಬ್ ತಂಡಕ್ಕೆ ಒಟ್ಟು 2 ಪಂದ್ಯಗಳಿದ್ದು, ಒಂದು ಪಂದ್ಯ ಗೆದ್ದರೆ ಪ್ಲೇ-ಆಫ್ ಹಾದಿ ಖಚಿತವಾಗಲಿದೆ.