Monday, August 8, 2022

Latest Posts

ಕಿನ್ನಜೆ ನಾರಾಯಣ ನಾಯಕ್‌ಗೆ ‘ಮಂಗಳೂರು ಪ್ರೆಸ್ ಕ್ಲಬ್’ ಪ್ರಶಸ್ತಿ

ಹೊಸ ದಿಗಂತ ವರದಿ, ಮಂಗಳೂರು:

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿ ವೇತನಗಳ ಮಾಹಿತಿ ಕೊಡುವ ಮೂಲಕ ಬಡ ಮಕ್ಕಳು ಕೂಡಾ ಆರ್ಥಿಕ ನೆರವು ಪಡೆದು ಉತ್ತಮ ಶಿಕ್ಷಣ ಪಡೆಯಲು ನೆರವು ನೀಡುತ್ತಿರುವ ನಿವೃತ್ತ ಶಿಕ್ಷಕ ಕಿನ್ನಜೆ ನಾರಾಯಣ ನಾಯಕ್ 2020ನೇ ಸಾಲಿನ ಪ್ರತಿಷ್ಠಿತ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಹಿರಿಯ ಪತ್ರಕರ್ತ ಎಂ.ರಘುರಾಮ್, ಅಂತಾರಾಷ್ಟ್ರೀಯ ಖ್ಯಾತಿಯ ಜಾದೂಗಾರ ಗಣೇಶ್ ಕುದ್ರೋಳಿ ಮತ್ತು ಸಾಮಾಜಿಕ ಕಾರ್ಯಕರ್ತ ಯತೀಶ್ ಬೈಕಂಪಾಡಿ ನೇತೃತ್ವದ ಆಯ್ಕೆ ಸಮಿತಿಯು ಮಂಗಳವಾರ ಈ ಆಯ್ಕೆ ಮಾಡಿದೆ. ಮಾರ್ಚ್ 21ರಂದು ಅಬ್ಬಕ್ಕ ರಾಣಿ ಕ್ರೂಸ್‌ನಲ್ಲಿ ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆ ಸಮಾರಂಭದಲ್ಲಿ ಕಿನ್ನಜೆ ನಾರಾಯಣ ನಾಯಕ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss