ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಅಣ್ಣ ಕಿರಣ್ ಕೊರೋನಾ ಸೋಂಕಿಗೆ ಬಲಿಯಾಗಿದ್ದು, ಈ ಕುರಿತು ಅರ್ಜುನ್ ಜನ್ಯ ಸಾಮಾಜಿಕ ಜಾಲತಾಣದಲ್ಲಿ ದುಃಖ ವ್ಯಕ್ತ ಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನೋವು ವ್ಯಕ್ತಪಡಿಸಿದ ಅರ್ಜುನ್ ಜನ್ಯ ‘ಈ ನೋವು ಹೇಗೆ ವ್ಯಕ್ತಪಡಿಸಬೇಕೇಂದು ತಿಳಿಯುತ್ತಿಲ್ಲ. ನನ್ನ ಕಡೆ ಉಸಿರುವವರೆಗೂ ನನ್ನ ಉಸಿರಲ್ಲಿ ನೀನು ಇರುತ್ತಿಯ’ ಎಂದು ಬರೆದಿದ್ದಾರೆ.
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಕಿರಣ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಾದ್ರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಹಿಂದೆ ಅರ್ಜುನ್ ಜನ್ಯ ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದು, ಬಳಿಕಸೋಂಕಿನಿಂದ ಗುಣಮುಖರಾಗಿದ್ದರು.