ವಿಸ್ಮಯ ಸಾವಿನ ಪ್ರಕರಣ: ಪತಿ ಕಿರಣ್ ಕುಮಾರ್‌ಗೆ 10 ವರ್ಷ ಶಿಕ್ಷೆ, 12.5 ಲಕ್ಷ ದಂಡ

ಹೊಸದಿಗಂತ ಜಿಜಿಟಲ್‌ ಡೆಸ್ಕ್‌:

ಯುವ ವೈದ್ಯೆ ವಿಸ್ಮಯ ಸಾವಿನ ಪ್ರಕರಣದಲ್ಲಿ ನಿನ್ನೆಯಷ್ಟೇ ಕೋರ್ಟ್ ಪತಿಯೇ ಅಪರಾಧಿ ಎಂದು ಘೋಷಿಸಿದ್ದು, ಇಂದು ಪತಿ ಕಿರಣ್ ಕುಮಾರ್‌ಗೆ ಕೊಲ್ಲಂ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದೆ. ಜೊತೆಗೆ 12 ಲಕ್ಷದ ಐವತ್ತು ಸಾವಿರ ರೂಪಾಯಿ ದಂಡವನ್ನು ನ್ಯಾಯಾಲಯ ವಿಧಿಸಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಬಿ), 498 (ಎ), ಮತ್ತು 306 ಮತ್ತು ವರದಕ್ಷಿಣೆ ನಿಷೇಧ ಕಾಯಿದೆಯ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ಕಿರಣ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ 22ರ ಹರೆಯದ ವಿಸ್ಮಯಾ ತನ್ನ ಗಂಡನ ಮನೆಯಿಂದ ಅನುಭವಿಸಿದ ದೈಹಿಕ ಮತ್ತು ಮಾನಸಿಕ ಹಿಂಸೆಯೇ ಆಕೆಯ ಆತ್ಮಹತ್ಯೆಗೆ ಕಾರಣವಾಯಿತು ಎಂದು ನ್ಯಾಯಾಲಯ ಗಮನಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!