ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ರಸ್ತೆ ಗುಂಡಿ ಮತ್ತು ಕಸ ವಿಲೇವಾರಿಯಲ್ಲಿನ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆ ಹುಟ್ಟುಹಾಕಿದ್ದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಿರಣ್ ಮಜುಂದಾರ್ ಶಾ ರಾಜ್ಯ ಸರ್ಕಾರದ ನಿರ್ವಹಣೆಯನ್ನು ಪ್ರಶ್ನಿಸುವಂತಹ ಟ್ವೀಟ್‌ಗಳನ್ನು ಮಾಡಿದ್ದಾರೆ. ತಮ್ಮ ಟ್ವೀಟ್‌ನಲ್ಲಿ “ಬೆಂಗಳೂರಿನಲ್ಲಿ ರಸ್ತೆಗಳು ಸರಿಯಾಗಿಲ್ಲ, ಕಸದ ವ್ಯವಸ್ಥೆ ಅಸಮಾಧಾನಕಾರಿಯಾಗಿದೆ ಎಂದೆಲ್ಲ ಟ್ವೀಟ್ ಮಾಡಿದ್ದರು. ಅದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಟ್ವೀಟ್‌ಗಳ ಹಿಂದೆ ಬೇರೆ ಅಜೆಂಡಾ ಇದೆ ಎಂದು ಹೇಳಿ ವಿವಾದಕ್ಕೆ ದಾರಿ ಮಾಡಿಕೊಟ್ಟಿದ್ದರು.
ಇದೆಲ್ಲದರ ಮಧ್ಯೆ ಈಗ ಕಿರಣ್ ಮಜುಂದಾರ್ ಶಾ ನೇರವಾಗಿ ಡಿಕೆಶಿಯನ್ನು ಭೇಟಿಯಾಗಿದ್ದಾರೆ. ಮೂಲಗಳ ಪ್ರಕಾರ, ಈ ಭೇಟಿಯ ಹಿನ್ನೆಲೆ ಒಂದು ಕಾರ್ಯಕ್ರಮಕ್ಕೆ ಆಹ್ವಾನ ನೀಡುವುದು ಎನ್ನಲಾಗಿದೆ. ಆದರೆ ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.