ಕಿರಣ್ ರಾಜ್‌ ಕಾರು ಅಪಘಾತ: ಹೆಲ್ತ್ ಅಪ್‌ಡೇಟ್ ಕೊಟ್ಟ ನಟ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ಕಿರಣ್ ರಾಜ್‌ಗೆ ಕಾರು ಅಪಘಾತವಾಗಿದ್ದು, ಇದೀಗ ಅವಘಡದ ಬಗ್ಗೆ ನಟ ರಿಯಾಕ್ಟ್ ಮಾಡಿದ್ದಾರೆ. ನಾನು ಈಗ ಆರೋಗ್ಯವಾಗಿದ್ದೇನೆ ಚಿಂತಿಸಬೇಡಿ ಎಂದು ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

ಏನಾಗಿದೆ ಅನ್ನೋದು ನಿಮಗೆಲ್ಲಾ ಮಾಹಿತಿ ಸಿಕ್ಕಿರುತ್ತದೆ. ಯಾರೆಲ್ಲಾ ಪ್ಯಾನಿಕ್ ಆಗಿ ಮೆಸೇಜ್ ಮಾಡುತ್ತಿರೋ ಚಿಂತಿಸಬೇಡಿ. ನಾನು ಈಗ ಆರೋಗ್ಯವಾಗಿದ್ದೇನೆ. ಸ್ವಲ್ಪ ಏಟಾಗಿತ್ತು ವೈದ್ಯರು ಚಿಕಿತ್ಸೆ ನೀಡಿದ್ದಾರೆ. ದಯವಿಟ್ಟು ಯಾರು ಆತಂಕಕ್ಕೆ ಒಳಗಾಗಬೇಡಿ. ಎಲ್ಲರಿಗೂ ಧನ್ಯವಾದಗಳು. ನಾನೀಗ ಆರೋಗ್ಯವಾಗಿದ್ದೇನೆ ಎಂದು ಕಿರಣ್ ರಾಜ್ ಹೆಲ್ತ್ ಬಗ್ಗೆ ಅಪ್‌ಡೇಟ್ ನೀಡಿದ್ದಾರೆ.

ಮುದ್ದರಾಯನ ಪಾಳ್ಯ ವೃದ್ದಾಶ್ರಮಕ್ಕೆ ಹೋಗಿ ಬರುತ್ತಿದ್ದಾಗ ಸೆ.10ರ ರಾತ್ರಿ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿತ್ತು. ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ್ ಕಾರು ಚಾಲನೆ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದ್ದರು. ಆಗ ಗುದ್ದಿದ ರಭಸಕ್ಕೆ ಕಿರಣ್ ರಾಜ್‌ಗೆ ಎದೆಯ ಭಾಗಕ್ಕೆ ಪೆಟ್ಟಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!