ರಾಜ್ಯಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಮಂಡಿಸಿದ ಕಿರಣ್ ರಿಜಿಜು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭೆಯಲ್ಲಿ ಬುಧವಾರ ಅಂಗೀಕಾರವಾದ ವಕ್ಫ್‌ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಯಿತು.

ಬಿಜೆಪಿ ನೇತೃತ್ವದ ಎನ್‌ಡಿಎ ರಾಜ್ಯಸಭೆಯಲ್ಲೂ ಹೆಚ್ಚಿನ ಸಂಸದರನ್ನು ಹೊಂದಿದೆ. ಬಿಜೆಪಿಯ 98 ಸಂಸದರು, ಮಿತ್ರಪಕ್ಷ ಜೆಡಿಯು ಪಕ್ಷದ ನಾಲ್ವರು, ಎನ್‌ಸಿಪಿಯ ಮೂವರು, ಟಿಡಿಪಿಯ ಇಬ್ಬರು ಮತ್ತು ಆರು ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಎನ್‌ಡಿಎ ಮೈತ್ರಿಕೂಟದ 125 ಸಂಸದರಿದ್ದಾರೆ. ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟ ಕಾಂಗ್ರೆಸ್‌ನ 27 ಸಂಸದರು, ತೃಣಮೂಲ ಕಾಂಗ್ರೆಸ್‌ನ 13 ಸೇರಿದಂತೆ 88 ಸಂಸದರನ್ನು ಹೊಂದಿದೆ. ನವೀನ್ ಪಟ್ನಾಯಕ್ ನೇತೃತ್ವದ BJD ಪಕ್ಷವು 7 ಸಂಸದರನ್ನು ಹೊಂದಿದೆ.

ಲೋಕಸಭೆಯಲ್ಲಿ ಸುಮಾರು 12 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ, ವಕ್ಫ್ (ತಿದ್ದುಪಡಿ) ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಕೈಗೆತ್ತಿಕೊಳ್ಳಲಾಯಿತು. ಮಸೂದೆಯ ಪರವಾಗಿ 288 ಮತಗಳು ಮತ್ತು ಮಸೂದೆಯ ವಿರುದ್ಧ 232 ಮತಗಳು ಚಲಾವಣೆಯಾಗಿ, ಲೋಕಸಭೆಯು ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!