ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಚಿವಾಲಯದ ಪುನರ್ ರಚನೆಯಾಗಿದ್ದು, ಕಾನೂನು ಸಚಿವ ಸ್ಥಾನವನ್ನು ಕಿರಣ್ ರಿಜಿಜು ಕಳೆದುಕೊಂಡಿದ್ದಾರೆ.
ಇದೀಗ ಕಿರಣ್ ರಿಜಿಜು ಅವರಿಗೆ ಭೂ ವಿಜ್ಞಾನ ಸಚಿವ ಸ್ಥಾನವನ್ನು ನೀಡಲಾಗಿದೆ. ಸಂಸದೀಯ ವ್ಯವಹಾರಗಳು ಮತ್ತು ಸಂಸ್ಕೃತಿ ಸಚಿವರಾಗಿರುವ ಅರ್ಜುನ್ ರಾಮ್ ಮೇಘ್ವಾಲ್ ಅವರಿಗೆ ಹೆಚ್ಚುವರಿಯಾಗಿ ಕಾನೂನು ಮತ್ತು ನ್ಯಾಯಾಂಗ ಸಚಿವ ಸ್ಥಾನ ನೀಡಲಾಗಿದೆ.
ನ್ಯಾಯಾಂಗ ಹಾಗೂ ಕೊಲಿಜಿಯಂ ಬಗ್ಗೆ ಹೇಳಿಕೆ ನೀಡಿದ್ದು, ರಿಜಿಜು ಹಾಗೂ ಉಪರಾಷ್ಟ್ರಪತಿ ಜಗದೀಶ್ ಧನಕರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.