ಸಿಕಂದರಾಬಾದ್‌ನಲ್ಲಿ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ: ಕೇಂದ್ರ ಸಚಿವ ಕಿಶನ್ ರೆಡ್ಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಿಕಂದರಾಬಾದ್ ನಲ್ಲಿ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಹೇಳಿದ್ದಾರೆ. ಬೆಂಕಿ ಹತೋಟಿಗೆ ಬರಲು ಸಮಯ ಹಿಡಿಯಲಿದೆ ಎಂದು ತಿಳಿಸಿದರು. ಇಂದು ಬೆಂಕಿ ಅವಘಡ ಸಂಭವಿಸಿದ ಕಟ್ಟಡವನ್ನು ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಅಗ್ನಿ ಅವಘಡಗಳ ಬಗ್ಗೆ ಸಮೀಕ್ಷೆ ನಡೆಯಬೇಕು. ಬೆಂಕಿ ಅನಾಹುತಗಳ ಬಗ್ಗೆ ಸರಕಾರ ಗಮನಹರಿಸಬೇಕು ಎಂದರು.

ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ದಟ್ಟ ಹೊಗೆಯಿಂದಾಗಿ ಸ್ಥಳೀಯ ಜನರು ತೀವ್ರ ತೊಂದರೆ ಅನುಭವಿಸಿದರು. ಪ್ರತಿ ಬಾರಿ ಜಿಎಚ್‌ಎಂಸಿಗೆ ಹಣ ಬೇಕಾದಾಗ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವುದು ಸರಿಯಲ್ಲ ಎಂದರು. ಬೆಂಕಿ ಅವಘಡಗಳಿಗೆ ಅಕ್ರಮ ಕಟ್ಟಡಗಳೇ ಕಾರಣ ಎಂದು ದೂರಿದರು.

ಅಕ್ರಮ ಕಟ್ಟಡಗಳಲ್ಲಿ ಮಾತ್ರ ಬೆಂಕಿ ಅವಘಡಗಳು ಸಂಭವಿಸುತ್ತಿವೆ. ಎಂಜಿನಿಯರಿಂಗ್ ವಿಭಾಗದ ತಜ್ಞರು ಬೆಂಕಿಯಿಂದ ಹಾನಿಗೊಳಗಾದ ಕಟ್ಟಡವನ್ನು ಪರಿಶೀಲಿಸುತ್ತಿದ್ದಾರೆ. ಅವರೆಲ್ಲರೂ ವಾರಂಗಲ್ ಎನ್‌ಐಟಿಗೆ ಸೇರಿದವರು. ಜಿಎಚ್‌ಎಂಸಿ ಅಧಿಕಾರಿಗಳು ಕಟ್ಟಡವನ್ನು ಪರಿಶೀಲಿಸುತ್ತಿದ್ದಾರೆ. ಕಟ್ಟಡದ ಸುತ್ತಮುತ್ತ ವಾಸಿಸುತ್ತಿದ್ದ ಜನರನ್ನು ಸ್ಥಳಾಂತರಿಸಲಾಗಿದೆ ಎಂದರು.

ಗುರುವಾರ ಸಿಕಂದರಾಬಾದ್ ರಾಂಗೋಪಾಲ್ ಪೇಟೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಡೆಕ್ಕನ್ ನಿಟ್ವೇರ್ ಸ್ಪೋರ್ಟ್ಸ್ ಶಾಪ್ನಲ್ಲಿ ಬೆಳಿಗ್ಗೆ 11.00 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸೆಲ್ಲರ್ ಒಂದರಲ್ಲಿ ಕಾಣಿಸಿಕೊಂಡ ಬೆಂಕಿ ಕ್ರಮೇಣ ಮೇಲಿನ ಮಹಡಿಗಳಿಗೂ ವ್ಯಾಪಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!