ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಆಧಾರಿತ ಶಾನುಭೋಗರ ಮಗಳು ಚಿತ್ರದಲ್ಲಿ ಬಹುಭಾಷಾ ನಟ ಕಿಶೋರ್ ವಿಶೇಷ ಪಾತ್ರವೊಂದನ್ನು ಮಾಡಲಿದ್ದಾರೆ.
ರಾಗಿಣಿ ಪ್ರಜ್ವಲ್ ಶಾನುಭೋಗರ ಮಗಳಾಗಿ ನಟಿಸಲಿದ್ದಾರೆ. ಇನ್ನು ಮೇಘಶ್ರೀ, ನಿರಂಜನ್ ಶೆಟ್ಟಿ, ರಮೇಶ್ ಭಟ್, ಸುಧಾ ಬೆಳವಾಡಿ ಮುಂತಾದವರು ಸಿನಿಮಾದಲ್ಲಿ ಕಾಣಿಸಲಿದ್ದಾರೆ. ಕನ್ನಡದಲ್ಲಿ ಅತಿ ಹೆಚ್ಚು ಕಾದಂಬರಿ ಆಧಾರಿತ ಸಿನಿಮಾಗಳನ್ನು ನಿರ್ದೇಶಿಸಿರುವ ಕೋಡ್ಲು ರಾಮಕೃಷ್ಣ ಈ ಸಿನಿಮಾಗೂ ಆಕ್ಷನ್ ಕಟ್ ಹೇಳಲಿದ್ದಾರೆ. ಸ್ವತಂತ್ರಪೂರ್ವದ ಕಥೆ ಇದಾಗಿದೆ.