ಬಾಲಕನಿಗೆ ಚುಂಬನ: ದಲೈಲಾಮ ವಿರುದ್ಧದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಾಲಕನೊಬ್ಬನಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಟಿಬೆಟನ್‌ ಧರ್ಮಗುರು ದಲೈಲಾಮ ವಿರುದ್ಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

ದಲೈಲಾಮ ಅವರು ಬಾಲಕನ ತುಟಿ ಚುಂಬಿಸಿ, ತಮ್ಮ ನಾಲಿಗೆ ಚೀಪುವಂತೆ ಹೇಳುವ ವಿಡಿಯೋ ಕಳೆದ ವರ್ಷ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವಿವಾದಕ್ಕೆ ಕಾರಣವಾಗಿತ್ತು.

ದಲೈಲಾಮ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ಕೋರಿ ‘ಕಾನ್ಫೆಡರೇಷನ್‌ ಆಫ್‌ ಎನ್‌ಜಿಒ’ ತನ್ನ ಅರ್ಜಿಯಲ್ಲಿ ಮನವಿ ಮಾಡಿತ್ತು.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ನೇತೃತ್ವದ ಪೀಠವು ಘಟನೆಯು ಪೂರ್ವಯೋಜಿತ ಅಲ್ಲ ಎಂದಿತ್ತಲ್ಲದೆ, ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿತು.

‘ಯಾಲಯವು ವಿಡಿಯೋವನ್ನು ನೋಡಿದ್ದು, ಆ ಘಟನೆಯು ಸಾರ್ವಜನಿಕ ವೇದಿಕೆಯಲ್ಲಿ ನಡೆದಿದೆ ಎಂಬುದನ್ನು ಕಂಡುಕೊಂಡಿದೆ. ಬಾಲಕನು ಪ್ರತಿವಾದಿ ನಂ.4ನ್ನು (ದಲೈಲಾಮ) ಭೇಟಿಯಾಗಿ ಅಪ್ಪಿಕೊಳ್ಳುವ ಬಯಕೆಯನ್ನು ವ್ಯಕ್ತಪಡಿಸಿದ್ದ ಎಂಬುದನ್ನೂ ನ್ಯಾಯಾಲಯ ಗಮನಿಸಿದೆ.ದಲೈಲಾಮ ಅವರು ತಮಾಷೆ ಮತ್ತು ಹಾಸ್ಯ ಮಾಡುವ ಉದ್ದೇಶದಿಂದ ಬಾಲಕನ ಜತೆ ಆ ರೀತಿ ವರ್ತಿಸಿರುವುದು ವಿಡಿಯೋವನ್ನು ನೋಡುವಾಗ ಸ್ಪಷ್ಟವಾಗುತ್ತದೆ. ಟಿಬೆಟನ್‌ ಸಂಸ್ಕೃತಿಯ ಹಿನ್ನೆಲೆಯಲ್ಲಿ ಈ ಘಟನೆಯನ್ನು ನೋಡಬೇಕು ಹೇಳಿದೆ .

ದಲೈಲಾಮ ಅವರು ಈ ಘಟನೆ ಬಗ್ಗೆ ಈಗಾಗಲೇ ಕ್ಷಮೆಯಾಚಿಸಿದ್ದಾರೆ ಎಂದು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರನ್ನೊಳಗೊಂಡ ಪೀಠ ಹೇಳಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!