ಅಡುಗೆ ಮನೆಯ ಗ್ಯಾಸ್ ಸಿಲಿಂಡರ್ ಸ್ಫೋಟ: ಓರ್ವ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಕ್ನೋದಲ್ಲಿ ಅಡುಗೆ ಮನೆಯ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಓರ್ವ ಮೃತಪಟ್ಟಿದ್ದಾರೆ.
ಎಂಟು ತಿಂಗಳ ಮಗು ಸೇರಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ 30 ವರ್ಷದ ಜುಬೈರ್ ಮೃತಪಟ್ಟಿದ್ದಾರೆ. ಉಳಿದ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದಿಂದಾಗಿ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!