ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ಟೋಬರ್ 23, 24 ಮತ್ತು 25ರಂದು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ “ಕಿತ್ತೂರು ವಿಜಯ ಉತ್ಸವ” ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದರು. ಇದೇ ವೇಳೆ ಕಿತ್ತೂರು ಉತ್ಸವದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.
1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರೊಂದಿಗೆ ಹೋರಾಡಿ ವಿಜಯಶಾಲಿಯಾದರು. ಈ ಯದ್ಧ ನಡೆದು 200 ವರ್ಷಗಳಾಗಿವೆ. ಹೀಗಾಗಿ ವಿಜಯೋತ್ಸವ ಆಚರಣೆ ಮಾಡುತ್ತಿದ್ದೇವೆ. ಕಿತ್ತೂರು ವಿಜಯ ಜ್ಯೋತಿ ಯಾತ್ರೆ ಇಂದಿನಿಂದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕಿತ್ತೂರು ತಲುಪಲಿದೆ. ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ನೆರವು ನೀಡುತ್ತಿದ್ದೇವೆ ಎಂದರು.