Friday, January 9, 2026

ಕಿತ್ತೂರುರಾಣಿ ಚನ್ನಮ್ಮನ ಪುತ್ಥಳಿ, ವೃತ್ತ ಲೋಕಾರ್ಪಣೆ: ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಚಾಲನೆ

ಹೊಸದಿಗಂತ ವರದಿ ವಿಜಯಪುರ:

ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮ ಕೇಂದ್ರ ಬಸ್ ನಿಲ್ದಾಣ ನಾಮಕರಣ ಸೇರಿ ಕಿತ್ತೂರು ಚನ್ನಮ್ಮ ಅಶ್ವಾರೂಢ ಪುತ್ಥಳಿ ಹಾಗೂ ವೃತ್ತದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ನೆರವೇರಿಸಿದರು.

ಬಹುದಿನಗಳಿಂದ ನನೆಗುದಿಗೆ ಬಿದಿದ್ದ ವೀರರಾಣಿ ಕಿತ್ತೂರು ಚನ್ನಮ್ಮ ಪುತ್ಥಳಿ ಹಾಗೂ ವೃತ್ತ ಮತ್ತು ವೆಲೋಡ್ರೋಮ್ ಉದ್ಘಾಟನೆ, ಕಿತ್ತೂರು ರಾಣಿ ಚನ್ನಮ್ಮ ನಾಟಕ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಸೇರಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಇದನ್ನೂ ಓದಿ: FOOD |ಸೂಪರ್ ಟೇಸ್ಟಿ ಗ್ರೀನ್ ಚಿಲ್ಲಿ ಚಿಕನ್ ತಿಂದಿದ್ದೀರಾ? ಇಲ್ಲಿದೆ ರೆಸಿಪಿ

ಅನಾವರಣಗೊಂಡ ಕಿತ್ತೂರು ರಾಣಿ ಚನ್ನಮ್ಮ ಪುತ್ಥಳಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
ಬೃಹತ್ ಹೂಮಾಲೆ ಹಾಕಿ, ಪುಷ್ಪಾರ್ಪಣೆ ಮಾಡಿದರು.

ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಜವಳಿ, ಸಕ್ಕರೆ, ಎಪಿಎಂಸಿ ಖಾತೆ ಸಚಿವ ಶಿವಾನಂದ ಪಾಟೀಲ, ಸಚಿವರಾದ ರಾಮಲಿಂಗಾ ರೆಡ್ಡಿ, ಎಚ್.ಸಿ. ಮಹಾದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ, ಹರಿಹರದ ವಚನಾನಂದ ಸ್ವಾಮೀಜಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಅಪ್ಪಾಜಿ ಸಿ.ಎಸ್. ನಾಡಗೌಡ, ನಾಗಠಾಣ ಶಾಸಕ ವಿಠ್ಠಲ ಕಟಧೋಂಡ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಎಂಎಲ್ ಸಿ ಸುನೀಲಗೌಡ ಪಾಟೀಲ, ಬುರಣಾಪುರ ಯೋಗೇಶ್ವರಿ ಮಾತಾ, ಪಂಚಮಸಾಲಿ ಮುಖಂಡ ಉಮೇಶ ಕೋಳಕೂರ ಸೇರಿ ಹಲವು ಗಣ್ಯರು ಇದ್ದರು.

error: Content is protected !!