ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಅವರನ್ನು ಅಪಹರಿಸಿದ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಚೌಕಿಮಠದ ಕ್ರಾಸ್ ಬಳಿ ದುಷ್ಕರ್ಮಿಗಳು ನಾಗರಾಜ್ ಅವರನ್ನು ಅಪಹರಿಸಿದ್ದಾರೆ ಎಂದು ನಾಗರಾಜ್ ತಂದೆ ಬಸವರಾಜ್ ದೂರಿದ್ದಾರೆ.
ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಿತ್ತೂರು ಪಟ್ಟಣದಲ್ಲಿ ಸೆ.3ರಂದು ಪಂಚಾಯಿತಿ ಚುನಾವಣೆ ನಡೆಯಲಿದ್ದು, ಬಿಜೆಪಿ 9, ಕಾಂಗ್ರೆಸ್ ಹಾಗೂ ಇತರೆ 9 ಸದಸ್ಯರಿದ್ದಾರೆ. ಹೀಗಾಗಿ, ಕಾಂಗ್ರೆಸ್ ಪಕ್ಷ ತನ್ನ ಸಂಖ್ಯಾಬಲ ಹೆಚ್ಚಿಸಿಕೊಳ್ಳಲು ತನ್ನ ಪಕ್ಷದ ಸದಸ್ಯರೊಬ್ಬರನ್ನು ಅಪಹರಿಸಿದೆ ಎಂದು ಬಿಜೆಪಿ ಆರೋಪಿಸಿದೆ.