ಹೊಸದಿಗಂತ ಡಿಜಿಟಲ್ ಡೆಸ್ಕ್:
ರಚಿನ್ ರವೀಂದ್ರ ಭರ್ಜರಿ ಶತಕ ಹಾಗೂ ಟಿಮ್ ಸೌಥಿ ಅರ್ಧಶತಕದ ನೆರವಿನಿಂದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 402 ರನ್ ಗಳಿಸಿದ್ದು, ಭಾರತದ ವಿರುದ್ಧ 356 ರನ್ ಮುನ್ನಡೆ ಕಾಯ್ದುಕೊಂಡಿದೆ.
ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್ ತಂಡವು ಭಾರತದ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ 350ಕ್ಕೂ ಅಧಿಕ ರನ್‌ಗಳ ಮುನ್ನಡೆ ಕಾಯ್ದುಕೊಂಡ ವಿಶೇಷ ಸಾಧನೆ ಮಾಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಿವೀಸ್ 3ನೇ ದಿನ ಅದ್ಭುತ ಪ್ರದರ್ಶನ ನೀಡಿದೆ. 134 ರನ್‌ಗಳ ಮುನ್ನಡೆಯೊಂದಿಗೆ ಕ್ರೀಸ್ ಆರಂಭಿಸಿದ್ದ ಕಿವೀಸ್ ಮುಂದಿನ 99 ರನ್ ಗಳಿಸುವಷ್ಟರಲ್ಲಿ ಪ್ರಮುಖ 4 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ರಚಿನ್ ರವೀಂದ್ರ ಹಾಗೂ ಟಿಮ್ ಸೌಥಿ ಜೋಡಿ ಸ್ಪೋಟಕ ಪ್ರದರ್ಶನ ನೀಡಿತು