ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಇಂದು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.
ಉಭಯ ತಂಡಗಳಿಗೆ ಫೈನಲ್ ತಲುಪಲು ಎರಡು ಅವಕಾಶಗಳಿದ್ದು, ಕೆಕೆಆರ್ ಮತ್ತು ಹೈದರಾಬಾದ್ ಈ ಪಂದ್ಯವನ್ನು ಗೆದ್ದು ಫೈನಲ್ ಸುತ್ತಿಗೆ ತಲುಪಲು ಪ್ರಯತ್ನಿಸುತ್ತಿವೆ.
ಗೌತಮ್ ಗಂಭೀರ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ 2012 ಮತ್ತು 2014ರಲ್ಲಿ ಪ್ರಶಸ್ತಿ ಗೆದ್ದಿದ್ದರೆ, 2016ರಲ್ಲಿ ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ಪ್ರಶಸ್ತಿ ಗೆದ್ದುಕೊಂಡಿತ್ತು.
ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.