ವೆಸ್ಟ್​ ಇಂಡೀಸ್​ ವಿರುದ್ಧದ ಟಿ-20 ಪಂದ್ಯದಿಂದ ಕೆಎಲ್​ ರಾಹುಲ್ ಔಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವೆಸ್ಟ್​ ಇಂಡೀಸ್​ ವಿರುದ್ಧದ ಐದು ಟಿ-20 ಪಂದ್ಯಗಳ ಸರಣಿಯಿಂದ ಆರಂಭಿಕ ಆಟಗಾರ ಕೆಎಲ್​ ರಾಹುಲ್ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ಕೋವಿಡ್​ ಸೋಂಕಿಗೊಳಗಾಗಿ ಚೇತರಿಸಿಕೊಳ್ಳುತ್ತಿರುವ ರಾಹುಲ್ ,ವೆಸ್ಟ್​ ಇಂಡೀಸ್ ಪ್ರವಾಸ ಕೈಗೊಂಡಿಲ್ಲ. ಹೀಗಾಗಿ, ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಜುಲೈ 29ರಿಂದ ವೆಸ್ಟ್​ ಇಂಡೀಸ್​ ವಿರುದ್ಧ ಟಿ20 ಸರಣಿ ಆರಂಭಗೊಳ್ಳಲಿದ್ದು, ರೋಹಿತ್ ಶರ್ಮಾ ಬಳಗ ಕಣಕ್ಕಿಳಿಯಲಿದೆ.
ಇನ್ನ್ನು ಆಗಸ್ಟ್ 18 ರಿಂದ ಪ್ರಾರಂಭವಾಗಲಿರುವ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರಾಹುಲ್ ಈಗ ಬಲವಾದ ಪುನರಾಗಮನವನ್ನ ಮಾಡುವ ಗುರಿಯನ್ನು ಹೊಂದಿದ್ದಾರೆ.

ಟಿ-20 ಪಂದ್ಯಗಳ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!