ಫಿಟ್​ನೆಸ್ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ಪಾಸ್: ಬ್ಯಾಕ್ ಟು ಏಷ್ಯಾ ಕಪ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟೀಮ್ ಇಂಡಿಯಾದ ವಿಕೆಟ್ ಕೀಪರ್, ಬ್ಯಾಟ್ಸ್​ಮನ್ ಕೆಎಲ್ ರಾಹುಲ್ (KL Rahul) ಫಿಟ್​ನೆಸ್ ಟೆಸ್ಟ್​ನಲ್ಲಿ ಪಾಸಾಗಿದ್ದು, ಏಷ್ಯಾ ಕಪ್ ಗೆ ಎಂಟ್ರಿ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಫಿಟ್​ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಈ ಮೂಲಕ ಕ್ಲಿಯರೆನ್ಸ್​​ನೊಂದಿಗೆ ಕೆಎಲ್ ರಾಹುಲ್ ಇದೀಗ ಶ್ರೀಲಂಕಾಗೆ ತೆರಳಲು ಅಣಿಯಾಗಿದ್ದಾರೆ .

ಇತ್ತೀಚೆಗೆ ಏಷ್ಯಾಕಪ್​ಗೆ ಆಯ್ಕೆ ಮಾಡಲಾಗಿದ್ದ ಟೀಮ್ ಇಂಡಿಯಾದಲ್ಲಿ ಕೆಎಲ್ ರಾಹುಲ್ ಕೂಡ ಸ್ಥಾನ ಪಡೆದಿದ್ದರು. ಆದರೆ ಅವರು ಸಂಪೂರ್ಣ ಫಿಟ್​ನೆಸ್ ಹೊಂದಿಲ್ಲದ ಕಾರಣ ಭಾರತ ತಂಡದೊಂದಿಗೆ ಶ್ರೀಲಂಕಾಗೆ ಪ್ರಯಾಣಿಸಿರಲಿಲ್ಲ.

ಇದೇ ಕಾರಣದಿಂದಾಗಿ ಪಾಕಿಸ್ತಾನ್ ಹಾಗೂ ನೇಪಾಳ ವಿರುದ್ಧದ ಪಂದ್ಯಕ್ಕೆ ಕೆಎಲ್ ರಾಹುಲ್ ಅಲಭ್ಯರಾಗಲಿದ್ದಾರೆ ಎಂದು ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದರು. ಇದೀಗ ನ್ಯಾಷನಲ್ ಆಕಾಡೆಮಿಯಲ್ಲಿ ನಡೆದ ಫಿಟ್​ನೆಸ್ ಟೆಸ್ಟ್​ನಲ್ಲಿ ರಾಹುಲ್ ಸಂಪೂರ್ಣ ಫಿಟ್​ನೆಸ್ ಹೊಂದಿರುವುದು ಸಾಬೀತಾಗಿದೆ.ಅದರಂತೆ ಭಾನುವಾರ ಅಥವಾ ಸೋಮವಾರ ಕೆಎಲ್ ರಾಹುಲ್ ಶ್ರೀಲಂಕಾಗೆ ಪ್ರಯಾಣಿಸುವ ಸಾಧ್ಯತೆಯಿದೆ.

ಕೆಎಲ್ ರಾಹುಲ್ ನೇಪಾಳ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ. ಈ ಪಂದ್ಯಕ್ಕೆ ಅವರು ಅಲಭ್ಯರಾಗುವುದು ಖಚಿತವಾಗಿದೆ. ಇನ್ನು ನೇಪಾಳ ವಿರುದ್ಧ ಟೀಮ್ ಇಂಡಿಯಾ ಗೆದ್ದರೆ ಅವರು ಸೂಪರ್-4 ಹಂತದಲ್ಲಿ ಕಣಕ್ಕಿಳಿಯಲಿದ್ದಾರೆ. ಅಂದರೆ ಟೀಮ್ ಇಂಡಿಯಾ ಸೂಪರ್ ಫೋರ್ ಹಂತಕ್ಕೇರಿದರೆ ಸೆಪ್ಟೆಂಬರ್ 10 ರಂದು ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!