ಚಿಕಿತ್ಸೆಗಾಗಿ ಕೆ.ಎಲ್.ರಾಹುಲ್​ ಜರ್ಮನಿಗೆ: ಇಂಗ್ಲೆಂಡ್​ ಪ್ರವಾಸಕ್ಕೆ ಗೈರು

ಹೊಸದಿಗಂತ ಆನ್ ಲೈನ್ ಡೆಸ್ಕ್:

ತೊಡೆಸಂದು ನೋವಿನಿಂದ ಬಳಲುತ್ತಿರುವ ಭಾರತದ ಸ್ಟಾರ್​ ಬ್ಯಾಟರ್​ ಕೆ.ಎಲ್.ರಾಹುಲ್​ ಚಿಕಿತ್ಸೆ ಪಡೆಯಲು ಜರ್ಮನಿಗೆ ತೆರಳಲಿದ್ದು, ಜೂನ್​ 1ರಿಂದ ಆರಂಭವಾಗುವ ಇಂಗ್ಲೆಂಡ್​ ವಿರುದ್ಧದ ಸರಣಿಗೆ ಅಲಭ್ಯರಾಗಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಕೆ.ಎಲ್​.ರಾಹುಲ್ ಗಾಯದಿಂದ ಚೇತರಿಸಿಕೊಳ್ಳದ ಕಾರಣ ಅವರಿಗೆ ಹೆಚ್ಚಿನ ಚಿಕಿತ್ಸೆಗೆ ಜರ್ಮನಿಗೆ ಕಳುಹಿಸಲಾಗುವುದು. ಈ ತಿಂಗಳ ಅಂತ್ಯ ಅಥವಾ ಜುಲೈ ಆರಂಭದಲ್ಲಿ ಅವರು ಜರ್ಮನಿಗೆ ತೆರಳಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಆಟಗಾರರ ಫಿಟ್​ನೆಸ್​ ಕಡೆಗೆ ಹೆಚ್ಚಿನ ಗಮನ ನೀಡಲಾಗುವುದು. ತೊಡೆಸಂದು ನೋವು ಅವರನ್ನು ಪದೇ ಪದೇ ಕಾಡುತ್ತಿರುವ ಕಾರಣ ಅವರಿಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಆರಂಭಕ್ಕೂ ಮುನ್ನ ರಾಹುಲ್​ ಗಾಯಕ್ಕೆ ತುತ್ತಾಗಿ ಸರಣಿಯಿಂದ ಹೊರಬಿದ್ದಿದ್ದರು. ಇದೀಗ ವಿದೇಶಕ್ಕೆ ಚಿಕಿತ್ಸೆಗೆ ತೆರಳುತ್ತಿರುವ ಕಾರಣ ಇಂಗ್ಲೆಂಡ್​ ವಿರುದ್ಧದ ಸರಣಿಯನ್ನು ತಪ್ಪಿಸಿಕೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!