ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ತೀವ್ರ ಹೊಟ್ಟೆ ನೋವಿನಿಂದ ಮುಂಬೈನ ಆಸ್ಪತ್ರೆ ಸೇರಿದ್ದ ಕ್ರಿಕೆಟಿಗ ಕೆ.ಎಲ್ ರಾಹುಲ್ ಅವರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕೆ.ಎಲ್. ರಾಹುಲ್ ಲ್ಯಾಪರೊಸ್ಕೋಪಿಕ್ ಅಪೆಂಡೆಕ್ಟಮಿ ಹೊಂದಿದ್ದು, ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಮತ್ತು ಚೇತರಿಕೆ ಕೂಡ ತ್ವರಿತವಾಗಿ ಆಗಲಿದೆ. ಒಂದು ವಾರದೊಳಗೆ ಎಲ್ಲಾ ಚಟುವಟಿಕೆಗಳನ್ನು ಪ್ರಾರಂಭಿಸಲು ಸಿದ್ಧರಾಗಿರುವಂತೆ ವೈದ್ಯರು ಕೆ.ಎಲ್. ರಾಹುಲ್ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಕೆ.ಎಲ್ ರಾಹುಲ್ ಅವರನ್ನು ಚಾರ್ಟರ್ ಪ್ಲೇನ್ ಮೂಲಕ ಅಹಮದಾಬಾದ್ʼನಿಂದ ಮುಂಬೈಗೆ ಸ್ಥಳಾಂತರಿಸಲಾಯಿತು. ಶೀಘ್ರದಲ್ಲೇ ಅವರು ಐಪಿಎಲ್ 2021 ಬಯೋ ಬಬಲ್ ಪ್ರವೇಶಿಸಲಿದ್ದಾರೆ ಎನ್ನಲಾಗಿದೆ.