ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ 3 ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
7ನೇ ತರಗತಿ ವಿದ್ಯಾರ್ಹತೆ ಜೊತೆಗೆ ಇತ್ತೀಚಿನ ವಾಹನ ಚಾಲನ ಪರವಾನಗಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಯು 18 ರಿಂದ 35 ವರ್ಷ ವಯೋಮಿತಿಯೊಳಗಿರಬೇಕು. ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 21,400/- ರಿಂದ 42,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಸೆಪ್ಟೆಂಬರ್ 8,2023ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.