RECRUITMENT | 24 ಡೇರಿ ಮೇಲ್ವೀಚಾರಕ ಹುದ್ದೆಗಳ ನೇಮಕಾತಿ… ತಿಂಗಳಿಗೆ 40 ಸಾವಿರ ವೇತನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಗಮ, ಬಳ್ಳಾರಿಯ ವಿವಿಧ ವೃಂದದಲ್ಲಿ ಖಾಲಿ ಇರುವ 24 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಡೇರಿ ಮೇಲ್ವಿಚಾರಕ ಹುದ್ದೆಗಳಿಗೆ ಬಿ.ಇ ಪದವಿ ಮತ್ತು ಆಡಳಿತ ಸಹಾಯಕ ದರ್ಜೆ-3 ಹುದ್ದೆಗಳಿಗೆ ಯಾವುದಾದರೂ ಪದವಿ, ಲೆಕ್ಕ ಸಹಾಯಕ ದರ್ಜೆ-3 ಹುದ್ದೆಗಳಗೆ ಬಿ.ಕಾಂ ಪದವಿ ಮತ್ತು ಕಿರಿಯ ತಾಂತ್ರಿಕರು ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಡೇರಿ ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,900/- ರಿಂದ 78,200/-ರೂ ಮತ್ತು ಆಡಳಿತ ಸಹಾಯಕ ದರ್ಜೆ-3, ಲೆಕ್ಕ ಸಹಾಯಕ ದರ್ಜೆ- 3 ಮತ್ತು ಕಿರಿಯ ತಾಂತ್ರಿಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-೧ ಹಾಗೂ ಅಂಗವಿಕಲ ಅಭ್ಯರ್ಥಿಗಳು 500/-ರೂ ಮತ್ತು ಇತರೆ ವರ್ಗದ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಫೆಬ್ರವರಿ 15,2023ರೊಳಗೆ ಪಾವತಿಸಬೇಕಿರುತ್ತದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಜನವರಿ 26,2023 ರಿಂದ ಫೆಬ್ರವರಿ 15,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!