RECRUITMENT | ಕೆಎಂಎಫ್‌ ಶಿಮುಲ್‌ ನಲ್ಲಿ 194 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ ಶಿವಮೊಗ್ಗ ಇಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ 194 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಖಾ ಲಿ ಹುದ್ದೆಗಳ ವಿವರ :
ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ) – 17 ಹುದ್ದೆಗಳು
ಸಹಾಯಕ ವ್ಯವಸ್ಥಾಪಕರು (ಆಡಳಿತ) – 1 ಹುದ್ದೆ
ಸಹಾಯಕ ವ್ಯವಸ್ಥಾಪಕರು (ಎಫ್ ಅಂಡ್ ಎಫ್) – 3 ಹುದ್ದೆಗಳು
ಎಂಐಎಸ್ /ಸಿಸ್ಟಂ ಆಫೀಸರ್ -1 ಹುದ್ದೆ
ಮಾರುಕಟ್ಟೆ ಅಧಿಕಾರಿ – 2 ಹುದ್ದೆಗಳು
ತಾಂತ್ರಿಕ ಅಧಿಕಾರಿ(ಅಭಿಯಂತರ) – 2 ಹುದ್ದೆಗಳು
ತಾಂತ್ರಿಕ ಅಧಿಕಾರಿ(ಗುಣನಿಯಂತ್ರಣ) – 2 ಹುದ್ದೆಗಳು
ತಾಂತ್ರಿಕ ಅಧಿಕಾರಿ(ಡಿಟಿ) – 14 ಹುದ್ದೆಗಳು
ಕೆಮಿಸ್ಟ್ ದರ್ಜೆ-1 – 4 ಹುದ್ದೆಗಳು
ವಿಸ್ತರಣಾಧಿಕಾರಿ ದರ್ಜೆ-3 – 17 ಹುದ್ದೆಗಳು
ಆಡಳಿತ ಸಹಾಯಕ ದರ್ಜೆ-2 – 17 ಹುದ್ದೆಗಳು
ಲೆಕ್ಕ ಸಹಾಯಕ ದರ್ಜೆ-2 – 12 ಹುದ್ದೆಗಳು
ಮಾರುಕಟ್ಟೆ ಸಹಾಯಕ ದರ್ಜೆ-2 – 10 ಹುದ್ದೆಗಳು
ಕೆಮಿಸ್ಟ್ ದರ್ಜೆ-2 – 28 ಹುದ್ದೆಗಳು
ಕಿರಿಯ ಸಿಸ್ಟಂ ಆಪರೇಟರ್ – 13 ಹುದ್ದೆಗಳು
ಶೀಘ್ರಲಿಪಿಗಾರರು ದರ್ಜೆ-2 – 1 ಹುದ್ದೆ
ಕಿರಿಯ ತಾಂತ್ರಿಕರು – 50 ಹುದ್ದೆಗಳು
ಒಟ್ಟು – 194 ಹುದ್ದೆಗಳು

ವಿದ್ಯಾರ್ಹತೆ :
ಈ ಹುದ್ದೆಗಳಿಗೆ 10ನೇ ತರಗತಿ, ಪದವಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ :
ಮಾರ್ಚ್‌ 3,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವೇತನ :
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 21,000/- ರಿಂದ 97,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :
ಸಾಮಾನ್ಯ ಅರ್ಜಿದಾರರು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-೧ ಮತ್ತು ಅಂಗವಿಕಲ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ :
ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾರ್ಚ್‌ 3,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!