RECRUITMENT | ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮದಲ್ಲಿ 219 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ
ನಿಗಮದಲ್ಲಿ 219 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಪಿಯುಸಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಲ್‌ಎಲ್‌ಬಿ ಮತ್ತು ಬಿ.ಇ ವಿದ್ಯಾರ್ಹತೆ ಜೊತೆಗೆ ಏಪ್ರಿಲ್‌ 17,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 97,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿದಾರರು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-೧ರ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಏಪ್ರಿಲ್‌ 17,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!