ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಕಾಂಗ್ರೆಸ್ ಪಕ್ಷದ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಸಂಪುಟದಿಂದ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ.
ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜಣ್ಣ ವಜಾ ಕುರಿತು ಮಾತನಾಡಿದ್ದಾರೆ. ಘಟನೆ ತುಂಬಾ ನೋವಾಗಿದೆ ಎಂದಿದ್ದಾರೆ.
ಕೆಎನ್ ರಾಜಣ್ಣ ಹಾಗೂ ನಂದು ಬರೋಬ್ಬರಿ 25 ವರ್ಷದ ಸ್ನೇಹ. ಯಾವ ಕಾರಣದಿಂದ ವಜಾ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ಕಳೆದ 25 ವರ್ಷದಿಂದ ನಾವಿಬ್ಬರು ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ಸಚಿವರ ರಾಜೀನಾಮೆ, ವಜಾ ವಿಚಾರ ನನ್ನ ವ್ಯಾಪ್ತಿಗೆ ಬರುವುದಿಲ್ಲ. ಆದರೆ ಈ ಘಟನೆ ನೋವಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ನನ್ನ ವ್ಯಾಪ್ತಿಯಲ್ಲಿ ಸಣ್ಣ ಪುಟ್ಟ ಶಾಸಕರಿಗೆ ಮಾತ್ರ ನೋಟಿಸ್ ಕೊಟ್ಟಿದ್ದೇನೆ. ಇದೆಲ್ಲವೂ ಮುಖ್ಯಮಂತ್ರಿ ವ್ಯಾಪ್ತಿಗೆ ಬರುತ್ತದೆ. ವಜಾ ಮಾಡಿರುವ ಕಾರಣ ನನಗೆ ಸ್ಪಷ್ಟವಾಗಿ ತಿಳಿದಿಲ್ಲ ಎಂದು ಡಿಕ ಶಿವಕುಮಾರ್ ಹೇಳಿದ್ದಾರೆ.
ಕೆಎನ್ ರಾಜಣ್ಣ ಹಾಗೂ ಡಿಕೆ ಶಿವಕುಮಾರ್ ನಡುವೆ ಹಲವು ಬಾರಿ ಮುಸುಕಿನ ಗುದ್ದಾಟಗಳೇ ನಡೆದಿದೆ. ಡಿಕೆ ಶಿವಕುಮಾರ್ ವಿರುದ್ಧ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದರು. ಪಕ್ಷದ ವಿರುದ್ಧ ಮಾತನಾಡಿ ಹೈಕಮಾಂಡ್ ಆಕ್ರೋಶಕ್ಕೂ ಗುರಿಯಾಗಿದ್ದರು. ಇದೀಗ ರಾಹುಲ್ ಗಾಂಧಿ ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಮತ ಕಳ್ಳತನ ಆರೋಪ ಮಾಡುತ್ತಿದ್ದರೆ, ಇತ್ತ ಕೆಎನ್ ರಾಜಣ್ಣ ರಾಹುಲ್ ಗಾಂಧಿಗೆ ವಿರುದ್ಧವಾಗಿ ಮಾತನಾಡಿದ್ದರು. ಇದೇ ಸಂದರ್ಭ ಬಳಸಿಕೊಂಡುಕೆಎನ್ ರಾಜಣ್ಣ ಅವರ ತಲೆದಂಡವಾಗಿದೆಯಾ ಅನ್ನೋ ಚರ್ಚೆಗಳು ಶುರುವಾಗಿದೆ.