ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಸೂಪರ್ ಮಾರ್ಕೆಟ್ ಒಂದರಲ್ಲಿ ವ್ಯಕ್ತಿಯೊಬ್ಬ ಚೂರಿಯಿಂದ ಸಾರ್ವಜನಿಕರಿಗೆ ಇರಿದಿದ್ದು, 5 ಜನ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ನ್ಯೂಜಿಲೆಂಡ್ ನ ಡುನೆಡಿನ್ ನಗರದಲ್ಲಿ ನಡೆದಿದೆ.
ಸೂಪರ್ ಮಾರ್ಕೆಟ್ ನಲ್ಲಿ ಜನರು ಖರೀದಿಯಲ್ಲಿ ತೊಡಗಿದ್ದ ಸಮಯದಲ್ಲಿ ವ್ಯಕ್ತಿಯೊಬ್ಬ ಚೂರಿ ಇರಿತ ಆರಂಭಿಸಿದ್ದು, ಜನರು ಹೆದರಿ ಅತ್ತಿತ್ತ ಓಡಿದ್ದಾರೆ. ಕೆಲವರು ಧೈರ್ಯ ಮಾಡಿ ಆರೋಪಿಯನ್ನು ಹಿಡಿಯುವಲ್ಲಿ ಸಫಲರಾಗಿದ್ದಾರೆ.
ಪ್ರಧಾನಿ ಜೆಸಿಂಡಾ ಆರ್ಡೆರ್ನ್ ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ದಾಳಿಯ ಹಿಂದಿನ ಉದ್ದೇಶ ಇನ್ನೂ ಖಚಿತವಾಗಿಲ್ಲ, ಇದೊಂದು ದೇಶೀಯ ಭಯೋತ್ಪಾದನೆ ಕೃತ್ಯ ಎಂದು ಹೇಳುವುದಕ್ಕೆ ಸದ್ಯ ಯಾವುದೇ ಸಾಕ್ಷ್ಯ ದೊರೆತಿಲ್ಲ ಎಂದು ತಿಳಿಸಿದ್ದಾರೆ.