ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸೈಫ್ ಅಲಿಖಾನ್ ಮನೆಗೆ ನುಗ್ಗಿ ದಾಳಿಕೋರರು ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ನಟನನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇತ್ತ ತನಿಖೆ ಆರಂಭಿಸಿರುವ ಪೊಲೀಸರು ಸೈಫ್ ಅಲಿ ಖಾನ್ ನಿವಾಸದಲ್ಲಿ ಕೆಲಸಕ್ಕಿದ್ದ ಮೂವರು ಸಿಬ್ಬಂದಿಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಆರೋಪಿ, ಮನೆಯ ಸೇವಕಿಯನ್ನು ಭೇಟಿಯಾಗಲು ಬಂದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಮನೆ ಸೇವಕಿ ಕೂಡ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಚೇತರಿಸಿಕೊಂಡ ಬಳಿಕ ಹೇಳಿಕೆ ಪಡೆಯಲು ಪೊಲೀಸರು ನಿರ್ಧರಿಸಿದ್ದಾರೆ.
ದಾಳಿಕೋರನು ಮೊದಲು ಮನೆ ಕೆಲಸದವಳ ಮೇಲೆ ದಾಳಿ ಮಾಡಿದ್ದಾನೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಅವರ ಧ್ವನಿಯನ್ನು ಕೇಳಿ ಸೈಫ್ ಅಲಿ ಖಾನ್ ಕೋಣೆಯಿಂದ ಆಚೆ ಬಂದು ಆತನ ಹಿಡಿಯಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.
ಮುಂಬೈ ಜಂಟಿ ಸಿಪಿ ಕಾನೂನು ಮತ್ತು ಸುವ್ಯವಸ್ಥೆ ಘಟನೆ ಬಗ್ಗೆ ಮಾಹಿತಿ ನೀಡಿ., ಘಟನೆ ನಂತರ ಸೈಫ್ ಅವರನ್ನು ಚಿಕಿತ್ಸೆಗಾಗಿ ಲೀಲಾವತಿಗೆ ಕರೆದೊಯ್ಯಲಾಗಿದೆ. ಆರೋಪಿ ಪತ್ತೆ ಹಚ್ಚಲು ಸಿಸಿಟಿವಿ ಸಹಾಯ ಪಡೆದುಕೊಂಡಿದ್ದೇವೆ. ಆರೋಪಿಯು ಸೈಫ್ ಮನೆಯಲ್ಲಿ ಕೆಲಸ ಮಾಡುವ ಕೆಲಸದಾಕೆಯನ್ನು ಭೇಟಿಯಾಗಲು ಬಂದಿರಬಹುದು. ಆರೋಪಿಗಳು ಕೆಲಸದಾಕೆಯ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ.
ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡ್ತಿದ್ದಾರೆ. ಸೈಫ್ ಅವರ ಮನೆಯವರನ್ನು ಸಹ ವಿಚಾರಣೆ ನಡೆಸಲಾಗುತ್ತಿದೆ. ಸೈಫ್ ದೇಹದ ಮೇಲೆ ಆರು ಬಾರಿ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಎರಡು ಗಾಯಗಳು ತುಂಬಾ ಆಳವಾಗಿವೆ ಎಂದು ವೈದ್ಯರು ದೃಢಪಡಿಸಿದ್ದಾರೆ.