ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಐಪಿಎಲ್‌ನ 39ನೇ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟನ್ಸ್ (GT) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಕೊಲ್ಕತ್ತಾದ ಈಡೆನ್ ಗಾರ್ಡನ್ ಮೈದಾನದಲ್ಲಿ ಮುಖಾಮುಖಿಯಾಗಿವೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ನಾಯಕ ಅಜಿಂಕ್ಯಾ ರಹಾನೆ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ.
ಗುಜರಾತ್ ಟೈಟಾನ್ಸ್ ತಂಡ ಆಡಿರುವ 7 ಪಂದ್ಯಗಳಲ್ಲಿ 5 ಗೆಲುವು ಹಾಗೂ 2 ಪಂದ್ಯಗಳಲ್ಲಿ ಸೋಲುವ ಮೂಲಕ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯಗಳಲ್ಲಿ 3 ಗೆಲುವು ಹಾಗೂ 4 ಸೋಲುಗಳ ಮೂಲಕ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ರಹಮಾನುಲ್ಲಾ ಗುರ್ಬಾಜ್ (ಕೀಪರ್), ಸುನಿಲ್ ನರೈನ್, ಅಜಿಂಕ್ಯಾ ರಹಾನೆ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಮೊಯಿನ್ ಅಲಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ ಇದ್ದಾರೆ.
ಗುಜರಾತ್ ಟೈಟಾನ್ಸ್ ತಂಡ : ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೀ), ಶೆರ್ಫೇನ್ ರುದರ್‌ಫೋರ್ಡ್, ರಾಹುಲ್ ತೆವಾಟಿಯಾ, ವಾಷಿಂಗ್ಟನ್ ಸುಂದರ್, ಶಾರುಖ್ ಖಾನ್, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ ತಂಡದಲ್ಲಿ ಇದ್ದಾರೆ.