ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದುಕೊಳ್ಳಿ, ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿ: ಸಿಎಂ ಸಿದ್ದು ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾನೇ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದೇನೆ ಎಂದು ತಿಳಿದುಕೊಳ್ಳಿ. ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದರೆ ನನಗೆ ಮತ ಹಾಕಿದಂತೆ. ಸ್ಥಳೀಯ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೋರಿದರು.

ಯರಗಟ್ಟಿಯ ಬಸವೇಶ್ವರ ಪ್ರೌಢಶಾಲಾ ಆವರಣದಲ್ಲಿ ಭಾನುವಾರ ನಡೆದ ಪ್ರಜಾಧ್ವನಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಮೇ 7ರಂದು ನಡೆಯಲಿರುವ ಬೆಳಗಾವಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬೆಂಬಲಿಸುವಂತೆ ಒತ್ತಾಯಿಸಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದಾರೆ. 2014ರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಲೋಕಸಭೆ ಸಂಸದೆಯಾಗಿ ಸ್ಪರ್ಧಿಸಿ ಸೋತಿದ್ದರು. ಈಗ ಅವರ ಮಗನನ್ನು ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!