ವಿರೋಧಿಸುವ ಮುನ್ನ ‘ಸಿಎಎ’ ಎಂದರೆ ಏನು ಎಂಬುದನ್ನು ತಿಳಿದುಕೊಳ್ಳಿ: ಕಂಗನಾ ರಣಾವತ್​

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act) ಜಾರಿಗೆ ಕೇಂದ್ರ ಸರ್ಕಾರ ಮಾರ್ಚ್​ 11ರಂದು ಅಧಿಸೂಚನೆ ಹೊರಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆ ಜೋರಾಗಿದೆ.

ನಟಿ ಕಂಗನಾ ರಣಾವತ್​ (Kangana Ranaut) ಅವರು ಕೂಡ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಅವರು ಸ್ವಾಗತಿಸಿದ್ದಾರೆ. ಆದರೆ ದಳಪತಿ ವಿಜಯ್​ ಸೇರಿದಂತೆ ಕೆಲವು ಸೆಲೆಬ್ರಿಟಿಗಳು ಪೌರತ್ವ ತಿದ್ದುಪಡಿ ಕಾಯ್ದೆಯ (CAA) ಬಗ್ಗೆ ತಕರಾರು ತೆಗೆದಿದ್ದಾರೆ.

ಕಂಗನಾ ರಣಾವತ್ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ಅವರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಸಿಎಎ ಎಂದು ಕ್ಯಾಪ್ಷನ್​ ನೀಡಿದ್ದು ಇಂಡಿಯನ್​ ಫ್ಲ್ಯಾಗ್​ ಎಮೋಜಿಯನ್ನು ಅವರು ಬಳಸಿದ್ದಾರೆ. ಆ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಆಗುತ್ತಿರುವುದಕ್ಕೆ ತಮ್ಮ ಬೆಂಬಲ ಇದೆ ಎಂಬುದನ್ನು ಅವರು ಸೂಚಿಸಿದ್ದಾರೆ.

2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಾತನಾಡಿದ ವಿಡಿಯೋವನ್ನು ಕಂಗನಾ ರಣಾವತ್​ ಅವರು ಈಗ ಹಂಚಿಕೊಂಡಿದ್ದಾರೆ. ‘ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ನಿಮ್ಮ ಭಾವನೆ ಮತ್ತು ಅಭಿಪ್ರಾಯವನ್ನು ವ್ಯಕ್ತಪಡಿಸುವುದಕ್ಕೂ ಮುನ್ನ ಸಿಎಎ ಎಂದರೆ ಏನು ಎಂಬುದನ್ನು ತಿಳಿದುಕೊಳ್ಳಿ’ ಎಂದು ಹೇಳಿದ್ದಾರೆ.

ಕಂಗನಾ ರಣಾವತ್​ ಅವರು ಇನ್ನೂ ನೇರವಾಗಿ ರಾಜಕೀಯಕ್ಕೆ ಕಾಲಿಟ್ಟಿಲ್ಲ. ಆದರೂ ಅವರು ರಾಜಕೀಯದ ಕುರಿತು ಅನೇಕ ವಿಚಾರಗಳ ಬಗ್ಗೆ ತಮ್ಮ ಅನಿಸಿಕೆ ತಿಳಿಸುತ್ತಿರುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!