ಹೊಸದಿಗಂತ ಕಲಬುರಗಿ:
ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದಲ್ಲಿ ನಡೆದಿದೆ.
ಸೋಮು ತಾಳಿಕೋಟಿ (40) ಕೊಲೆಯಾಗಿರುವ ರೌಡಿಶೀಟರ್ ಆಗಿದ್ದು, ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು ಆಳಂದ ರಸ್ತೆಯ ರೈಲ್ವೆ ಹಳಿ ಬಳಿ ಶವವನ್ನು ಬಿಸಾಕಿದ್ದಾರೆ.
ರೌಡಿಶೀಟರ್ ಸೋಮು ತಾಳಿಕೋಟಿ ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿಯಾಗಿದ್ದು,ಕೆಲ ತಿಂಗಳ ಹಿಂದೆ ಪಟ್ಟಣ ಗ್ರಾಮದ ಧಾಬಾ ಮಾಲೀಕರೊಂದಿಗೆ ಗಲಾಟೆ ಮಾಡಿಕೊಂಡಿದ್ದನು.ಧಾಬಾ ಮಾಲೀಕನನ್ನು ಸೋಮು ಆಂಡ್ ಗ್ಯಾಂಗ್ ಹಲ್ಲೆ ಮಾಡಿದ್ದರು.
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು,ಈ ಕುರಿತು ಸಬ್ ಅರ್ಬನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.