ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕೊಡಗು:
ಜಿಲ್ಲೆಯಲ್ಲಿ ಬುಧವಾರ ಮತ್ತೆ 113 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ.4.87ಕ್ಕೆ ಏರಿಕೆಯಾಗಿದೆ. ಅಲ್ಲದೆ ಕಳೆದ 24 ಗಂಟೆಗಳಲ್ಲಿ ಮೂವರು ಸೋಂಕಿಗೆ ಬಲಿಯಾಗುವುದರೊಂದಿಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 380ಕ್ಕೆ ಜಿಗಿದಿದೆ.
ಬುಧವಾರ ಮಡಿಕೇರಿ ತಾಲೂಕಿನಲ್ಲಿ 45 ಸೋಮವಾರಪೇಟೆ ತಾಲೂಕಿನಲ್ಲಿ 42 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 26 ಪ್ರಕರಣಗಳು ವರದಿಯಾಗಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 30,239 ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 174 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ 28,997 ರಷ್ಟಾಗಿದೆ.
ಪ್ರಸಕ್ತ ಜಿಲ್ಲೆಯಲ್ಲಿ 862 ಸಕ್ರಿಯ ಪ್ರಕರಣಗಳಿದ್ದು, 163 ಕಂಟೈನ್ ಮೆಂಟ್ ವಲಯಗಳಿರುವುದಾಗಿ ಜಿಲ್ಲಾಧಿಕಾರಿ ಹೇಳಿದ್ದಾರೆ.