ಕೊಡಗು| 371 ಹೊಸ ಕೋವಿಡ್ ಪ್ರಕರಣ ದೃಢ: ಒಂದು ಸಾವು

ಹೊಸ ದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 371 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.ಅಲ್ಲದೆ ಒಬ್ಬರು ಸಾವಿಗೀಡಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ‌ 157, ಸೋಮವಾರಪೇಟೆ ತಾಲೂಕಿನಲ್ಲಿ 115 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 99 ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 42704 ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 483 ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 38149ಮಂದಿ ಸೋಂಕು ಮುಕ್ತರಾದಂತಾಗಿದೆ.ಒಟ್ಟು 441ಮಂದಿ ಸಾವಿಗೀಡಾಗಿದ್ದು, ಪ್ರಸಕ್ತ ಜಿಲ್ಲೆಯಲ್ಲಿ 4115 ಸಕ್ರಿಯ ಪ್ರಕರಣ, 268 ಕಂಟೈನ್ ಮೆಂಟ್ ವಲಯಗಳು ಹಾಗೂ ಪಾಸಿಟಿವಿಟಿ ದರ ಶೇ.14.36ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!