Monday, August 8, 2022

Latest Posts

ಕೊಡಗು| ಇಂದು 45 ಹೊಸ ಕೋವಿಡ್ ಪ್ರಕರಣ ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸ ದಿಗಂತ ವರದಿ, ಕೊಡಗು:

ಜಿಲ್ಲೆಯಲ್ಲಿ ಶುಕ್ರವಾರ 45 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ 15,ಸೋಮವಾರಪೇಟೆ ತಾಲೂಕಿನಲ್ಲಿ 16, ವೀರಾಜಪೇಟೆ ತಾಲೂಕಿನಲ್ಲಿ 14 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 30,853ರಷ್ಟಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 108 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ಒಟ್ಟು 30,031 ಮಂದಿ ಸೋಂಕು ಮುಕ್ತರಾದಂತಾಗಿದೆ.
ಜಿಲ್ಲೆಯಲ್ಲಿ 438 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಒಬ್ಬರು ಸಾವಿಗೀಡಾಗಿದ್ದು, ಸತ್ತವರ ಸಂಖ್ಯೆ384ಕ್ಕೆ ಏರಿಕೆಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 107 ಹಾಗೂ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.2.06ರಷ್ಟು ಇರುವುದಾಗಿ
ಜಿಲ್ಲಾಧಿಕಾರಿ ವಿವರಿಸಿದ್ದಾರೆ. ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss