ಕೊಡಗು:7 ಹೊಸ ಕೋವಿಡ್ ಪ್ರಕರಣ ಪತ್ತೆ

ಹೊಸ ದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಶನಿವಾರ 7ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಸೋಮವಾರಪೇಟೆ ತಾಲೂಕಿನಲ್ಲಿ 3ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 4 ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 47,659ರಷ್ಟಾಗಿದೆ.
ಕಳೆದ 24 ಗಂಟೆಗಳಲ್ಲಿ 14 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಸೋಂಕು ಮುಕ್ತರಾದವರ ಒಟ್ಟು ಸಂಖ್ಯೆ 47,143ರಷ್ಟಾಗಿದೆ. ಅಲ್ಲದೆ ಇದುವರೆಗೆ ಒಟ್ಟು 451 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 65 ಸಕ್ರಿಯ ಪ್ರಕರಣಗಳಿದ್ದು ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 25 ಹಾಗೂ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.1ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!