ಹೊಸದಿಗಂತ ವರದಿ, ಕುಶಾಲನಗರ
ಬಾಲಕನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಕುರಿತಾಗಿ ಅನೇಕ ಸಂಶಯಗಳು ಉದ್ಭವವಾಗಿವೆ.
ಇಲ್ಲಿಗೆ ಸಮೀಪದ ಕೂಡುಮಂಗಳೂರು ಗ್ರಾ.ಪಂ. ವ್ಯಾಪ್ತಿಯ ಬೆಂಡೆಬೆಟ್ಟ ಗಿರಿಜನ ಹಾಡಿಯಲ್ಲಿ, ಮೂಕಾಂಬಿಕ ಪ್ರೌಢಶಾಲೆಯ ವಿದ್ಯಾರ್ಥಿ ಮಂಜುನಾಥ್ (15) ಎಂಬಾತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.
ಬಾಲಕನ ಸಾವಿನ ಬಗ್ಗೆ ಸಂಬಂಧಿಕರು, ಸಂಶಯ ವ್ಯಕ್ತಪಡಿಸಿದ್ದಾರೆ. ಆತನ ಅಜ್ಜ-ಅಜ್ಜಿಯೇ ಮಂಜುನಾಥ್’ನನ್ನು ಹೊಡೆದು ಹತ್ಯೆ ಮಾಡಿರುವುದಾಗಿ ಆರೋಪಿಸಿದ್ದಾರೆ.
ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ