Wednesday, October 5, 2022

Latest Posts

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ವಾಲಿದ ಬಸ್:‌ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಹೊಸದಿಗಂತ ವರದಿ, ಮಡಿಕೇರಿ:
ಚಾಲಕನ ನಿಯಂತ್ರಣ ತಪ್ಪಿದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ರಸ್ತೆ ಬದಿಗೆ ವಾಲಿದ ಪರಿಣಾಮ ಅದರಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಶನಿವಾರ ಬೆಳಗ್ಗೆ ಹಾಸನದಿಂದ ಮಡಿಕೇರಿಗೆ ಬರುತ್ತಿದ್ದ ಕೆಎಸ್‍ಆರ್‌ಟಿಸಿ ಬಸ್ಸೊಂದು ಕುಶಾಲನಗರದ ಆನೆಕಾಡು ತೊಂಡೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಒಂದು ಬದಿಗೆ ವಾಲಿದೆ.
ಇದರಿಂದಾಗಿ ಬಸ್ಸಿನೊಳಗಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.
ಇದೇ ವೇಳೆ ಕುಶಾಲನಗರ ಮಾರ್ಗವಾಗಿ ಬರುತ್ತಿದ್ದ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರು ಬಸ್ಸು ಅವಘಡವನ್ನು ಕಂಡು ಸಾರ್ವಜನಿಕರೊಂದಿಗೆ ಸೇರಿ ಜನರ ರಕ್ಷಣೆಗೆ ಮುಂದಾದರು. ಬಸ್ಸು ಒಂದು ಕಡೆ ವಾಲಿದ್ದರಿಂದ ಬಸ್ಸಿನ ಚಾಲಕನ ಹಾಗೂ ತುರ್ತು ನಿರ್ಗಮನ ಬಾಗಿಲಿನ ಮೂಲಕ ಪ್ರಯಾಣಿಕರನ್ನು ಹೊರಗೆ ತರಬೇಕಾಯಿತು.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ಕುಶಾಲನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮಡಿಕೇರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಬಸ್ಸು ಅಪಘಾತಕ್ಕೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!