ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗು| ಜೂ.21ರವರೆಗೂ ಲಾಕ್‍ಡೌನ್ ಮುಂದುವರಿಕೆ: ವಿ.ಸೋಮಣ್ಣ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಜೂನ್ 21 ರವರೆಗೂ ಲಾಕ್‍ಡೌನ್ ಮುಂದುವರೆಯಲಿದ್ದು, ಈಗಿರುವ ನಿಯಮಗಳು ಹಾಗೂ ಮಾರ್ಗಸೂಚಿಗಳು ಮುಂದುವರೆಯಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದರು.
ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಹಾಗೂ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ ನಡೆಸಿ ಮಾಹಿತಿ ಪಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಲಾಕ್‍ಡೌನ್ ಅವಧಿಯಲ್ಲಿ ವಾರದ ಮೂರು ದಿನದಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿರುತ್ತದೆ ಎಂದು ಹೇಳಿದರು.
ಕೊಡಗು ಜಿಲ್ಲೆಯಲ್ಲಿ 2018, 2019 ಮತ್ತು 2020 ರಲ್ಲಿ ಸಂಭವಿಸಿದ ಪ್ರಾಕೃತಿಕ ಅವಘಡಗಳು ಮತ್ತೆ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಆ ನಿಟ್ಟಿನಲ್ಲಿ ಅಗತ್ಯವಿರುವೆಡೆ ಮಾತ್ರ ಸೂಕ್ಷ್ಮ ಪ್ರದೇಶದ ಜನರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಕೋವಿಡ್-19 ಲಕ್ಷಣಗಳು ಕಂಡುಬಂದಲ್ಲಿ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅಡ್ಡದಾರಿ ಹಿಡಿಯಬಾರದು ಎಂದು ಸಚಿವರು ಕೋರಿದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss