Saturday, August 13, 2022

Latest Posts

ಕೊಡಗು| ಒಂದೇ ದಿನ 46 ಹೊಸ ಕೋವಿಡ್ ಪ್ರಕರಣ ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಶನಿವಾರ 46 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಮಡಿಕೇರಿ ತಾಲೂಕಿನಲ್ಲಿ 19, ಸೋಮವಾರಪೇಟೆ ತಾಲೂಕಿನಲ್ಲಿ 17 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 10 ಪ್ರಕರಣಗಳು ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಸಂಖ್ಯೆ 30,899ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 62ಮಂದಿ ಗುಣಮುಖರಾಗುವುದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ 30,093ಕ್ಕೆ ಏರಿಕೆಯಾಗಿದೆ.

ಪ್ರಸಕ್ತ 422 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 384 ಮಂದಿ ಸಾವಿವೀಡಾಗಿದ್ದಾರೆ.100 ಕಂಟೈನ್ ಮೆಂಟ್ ವಲಯಗಳಿದ್ದು,ಪಾಸಿಟಿವಿಟಿ ದರ ಶೇ. 2.03ರಷ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss