ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕೊಡಗು:
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿಗೆ ಒಳಗಾದವರ ಸಂಖ್ಯೆಯಲ್ಲಿ ಇಳಿಮುಖವಾಗಿದ್ದರೂ ಮತ್ತೆ 12 ಮಂದಿ ಬಲಿಯಾಗುವ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 213ಕ್ಕೆ ಏರಿಕೆಯಾಗಿದೆ.
ಶುಕ್ರವಾರ ಜಿಲ್ಲೆಯಲ್ಲಿ ಹೊಸದಾಗಿ 472 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 19,270 ರಷ್ಟಾಗಿದೆ.
ಮಡಿಕೇರಿ ತಾಲೂಕಿನಲ್ಲಿ 239, ಸೋಮವಾರಪೇಟೆ ತಾಲೂಕಿನಲ್ಲಿ 117 ವೀರಾಜಪೇಟೆ ತಾಲೂಕಿನಲ್ಲಿ 116 ಹೊಸ ಕೋವಿಡ್-ಪ್ರಕರಣಗಳು ಕಂಡುಬಂದಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 669 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಯ, ಇದರೊಂದಿಗೆ ಒಟ್ಟು 14,046 ಮಂದಿ ಗುಣಮುಖರಾದಂತಾಗಿದೆ. 5,011 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 12 ಮಂದಿ ಸಾವುಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 480 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.