Wednesday, February 8, 2023

Latest Posts

ಕೊಡಗು| ಗಣರಾಜ್ಯೋತ್ಸವ ಆಚರಣೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಹೊಸದಿಗಂತ ವರದಿ, ಕೊಡಗು:

ಜನವರಿ 26 ರ ಗಣರಾಜ್ಯೋತ್ಸವ ದಿನವನ್ನು ಆಚರಿಸುವ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಯವರು, ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವುದು ಬೇಡ ಎಂದು ತಿಳಿಸಿದರು.
ಉಳಿದಂತೆ ಕವಾಯತು ತಂಡಗಳ ಸಿದ್ಧತೆ ಮಾಡಿಕೊಳ್ಳುವುದು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವುದು, ಕುಡಿಯುವ ನೀರು ಪೂರೈಸುವುದು ಮತ್ತಿತರ ಬಗ್ಗೆ ನಿರ್ದೇಶನ ನೀಡಿದರು.
ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಕಳೆದ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ನಡಾವಳಿ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಜಿ.ಪಂ.ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ, ಭೂ ದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್, ಲೋಕೋಪಯೋಗಿ ಇಲಾಖೆಯ ಎಇಇ ಶಿವರಾಮ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಶಂಕರ ನಾರಾಯಣ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಸುರೇಶ್ ಭಟ್, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ವಿಶಾಲ್ ಕುಮಾರ್, ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕಿ ಪದ್ಮಜಾ, ಐಟಿಡಿಪಿ ಇಲಾಖಾ ಅಧಿಕಾರಿ ಶ್ರೀನಿವಾಸ್, ಬಿಸಿಎಂ ಇಲಾಖೆ ಅಧಿಕಾರಿ ಮಂಜುನಾಥ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್, ತಾಲ್ಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್.ಗುರುಸ್ವಾಮಿ, ಸೆಸ್ಕ್ ಎಇಇ ವಿನಯ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್ ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!