Friday, June 2, 2023

Latest Posts

ಪಂಜಾಬ್ ಸರಕಾರದ ನಡೆಗೆ ಕೊಡಗಿನಲ್ಲೂ ಅಸಮಾಧಾನ: ಬೇಸರ ವ್ಯಕ್ತಪಡಿಸಿದ ಶಾಸಕ ಕೆ.ಜಿ.ಬೋಪಯ್ಯ

ಹೊಸದಿಗಂತ ವರದಿ, ಕೊಡಗು:
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರಕಾರಿ ಕಾರ್ಯಕ್ರಮಕ್ಕೆ ತೆರಳದಂತೆ ಮಾಡಿರುವ ಹಾಗೂ ಭದ್ರತಾ ನಿಯಮಗಳನ್ನು ಉಲ್ಲಂಘಿಸಿರುವ ಪಂಜಾಬ್ ಸರಕಾರದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ಪಂಜಾಬ್‌ ರಾಜ್ಯದ ಕಾಂಗ್ರೆಸ್‌ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ಕಾರಿ ಕಾರ್ಯಕ್ರಮಕ್ಕೆ ತೆರಳದಂತೆ ಮಾಡಿದ್ದಲ್ಲದೇ, ಭದ್ರತೆಯ ನಿಯಮಗಳನ್ನು ಗಾಳಿಗೆ ತೂರಿ ದೇಶದ ಪ್ರಧಾನಿಯ ಭದ್ರತೆಗೆ ಕಾಂಗ್ರೆಸ್ ಸವಾಲೊಡ್ಡಿದೆ. ಇದು ಕಾಂಗ್ರೆಸ್ ನ ಸರ್ವಾಧಿಕಾರಿ ಮಾನಸಿಕತೆಯನ್ನು ತೋರ್ಪಡಿಸುತ್ತದೆ ಎಂದು ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಆರೋಪಿಸಿದ್ದಾರೆ.
ದೇಶದ ಪ್ರಧಾನಿಯೊಬ್ಬರನ್ನು ಹಲವು ನಿಮಿಷಗಳ ಕಾಲ ನಡುರಸ್ತೆಯಲ್ಲಿ ನಿಲ್ಲುವಂತೆ ಮಾಡಿದ ಪಂಜಾಬ್‌ ಸರ್ಕಾರದ ಈ ನಡೆ ಖಂಡನೀಯ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಂಜಾಬ್‌’ನ ಕಾಂಗ್ರೆಸ್‌ ಸರ್ಕಾರದ ನಡೆಗೆ ಸಂಸದ ಪ್ರತಾಪ್ ಸಿಂಹ ಅವರು ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ಕಾರಿ ಕಾರ್ಯಕ್ರಮಕ್ಕೆ ತೆರಳದಂತೆ ಪಂಜಾಬ್’ನ ಕಾಂಗ್ರೆಸ್ ಸರಕಾರ ಮಾಡಿದೆ. ಭದ್ರತೆಯ ನಿಯಮಗಳನ್ನು ಗಾಳಿಗೆ ತೂರಿ ದೇಶದ ಪ್ರಧಾನಿ ಒಬ್ಬರನ್ನು ಹಲವು ನಿಮಿಷಗಳ ಕಾಲ ನಡುರಸ್ತೆಯಲ್ಲಿ ನಿಲ್ಲಿಸಿದೆ. ಒದು ಖಂಡನೀಯ ಎಂದು ಅವರು ಕಿಡಿಕಾರಿದ್ದಾರೆ.
ಸರ್ಕಾರಿ ಕಾರ್ಯಕ್ರಮದ ನಿಮಿತ್ತ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗೆ ಪಂಜಾಬ್’ನ ಕಾಂಗ್ರೆಸ್ ಸರ್ಕಾರ ಅಡ್ಡಿಪಡಿಸಿ ದಾರಿಯಲ್ಲಿ ನಿಲ್ಲುವಂತೆ ಮಾಡಿದೆ ಎಂದು ಆರೋಪಿಸಿರುವ ಕೊಡಗು ಯುವ ಸೇನೆ, ಪಂಜಾಬ್ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯವೆಂದು ತಿಳಿಸಿದೆ.
ಯುವ ಸೇನೆಯ ಪ್ರಮುಖರಾದ ಕುಲದೀಪ್ ಪೂಣಚ್ಚ, ಮಾಚೆಟ್ಟಿರ ಸಚಿನ್ ಮಂದಣ್ಣ, ವೇಣು ಪೊನ್ನೇಟಿ, ಕೊರಕುಟ್ಟಿರ ಲತಾ ಬೋಪಯ್ಯ ಹಾಗೂ ಹರಪಹಳ್ಳಿ ಅಶ್ವಥ್ ಗೌಡ ಅವರು ಪಂಜಾಬ್ ಸರಕಾರದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಪ್ರಧಾನಿ ಅವರನ್ನೇ ಈ ರೀತಿ ನಡೆಸಿಕೊಳ್ಳುವ ಕಾಂಗ್ರೆಸ್, ಮುಂದೆ ಅಧಿಕಾರಕ್ಕೆ ಬಂದರೆ ಸಾಮಾನ್ಯ ಜನರಿಗೆ ಯಾವ ರೀತಿಯ ಭದ್ರತೆ ನೀಡಲಿದೆ ಎಂದು ತಿಳಿದುಕೊಳ್ಳಬೇಕಿದೆ. ಭಾರತದ ಪ್ರಜ್ಞಾವಂತ ಜನರು ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು ಮುಂದೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!