ನಾಳೆಯಿಂದ ಕಾಲೇಜು ಆರಂಭ: ಕೋರ್ಟ್ ಆದೇಶ ಪಾಲಿಸಲು ಕೊಡಗು ಜಿಲ್ಲಾಧಿಕಾರಿ ಸೂಚನೆ

ಹೊಸದಿಗಂತ ವರದಿ,ಮಡಿಕೇರಿ :

ಬುಧವಾರದಿಂದ ಕಾಲೇಜುಗಳು ಆರಂಭವಾಗಲಿದ್ದು, ಹೈಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ.‌ಬಿ.ಸಿ.ಸತೀಶ ಅವರು ಜಿಲ್ಲೆಯ ಎಲ್ಲಾ ಕಾಲೇಜು ಪ್ರಾಂಶುಪಾಲರಿಗೆ ಸೂಚಿಸಿದರು.
ನಗರದ ತಮ್ಮ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಂಜೆ ಜಿಲ್ಲೆಯ ಕಾಲೇಜು ಪ್ರಾಂಶುಪಾಲರೊಂದಿಗೆ ಸಭೆ ನಡೆಸಿದ ಅವರು, ಯಾವುದೇ ಕಾರಣಕ್ಕೂ ಧಾರ್ಮಿಕ ಉಡುಪು ಧರಿಸಿ ಕಾಲೇಜು ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಾಂಶುಪಾಲರಿಗೆ ಹಲವು ಸಲಹೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿಗಳ ಹೊರತುಪಡಿಸಿ ಬೇರೆಯವರಿಗೆ ಕಾಲೇಜು ಪ್ರವೇಶ ಇರುವುದಿಲ್ಲ ಎಂದರಲ್ಲದೆ, ವಿದ್ಯಾರ್ಥಿಗಳ ಮೇಲೆ ದೈಹಿಕ ಬಲ ಪ್ರಯೋಗ ಮಾಡದಿರುವಂತೆಯೂ ಸೂಚನೆ ನೀಡಿದರು. ಆದರೆ ವಿವಿಧ ಕಾಲೇಜು ಪ್ರಾಮಶುಪಾಲರು ಅಸಹಾಯಕತೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ‌ ರಾಜು ಮೊಗವೀರ,ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!