JOB| ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ 64 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ 64 ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಡಿಸೆಂಬರ್‌ 10,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಬೆರಳಚ್ಚು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಡಿಸೆಂಬರ್‌ 10,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!