Thursday, August 11, 2022

Latest Posts

ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದಿಂದ 1.35 ಲ.ರೂ. ಮೌಲ್ಯದ ಔಷಧಿ ಹಸ್ತಾಂತರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘ ವತಿಯಿಂದ ಕೋವಿಡ್ 19 ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ 1.35 ಲಕ್ಷ ರೂ ಮೌಲ್ಯದ ಔಷಧಿಯನ್ನು ಸೋಮವಾರ ಹಸ್ತಾಂತರಿಸಲಾಯಿತು.
ಕೋವಿಡ್ 19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅತ್ಯವಶ್ಯಕವಾಗಿ ಬೇಕಿರುವ ಮಾತ್ರೆಗಳನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ಅವರು ಹಸ್ತಾಂತರಿಸಿದರು. ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘಕ್ಕೆ ಜಿಲ್ಲಾಧಿಕಾರಿ ಅವರು ಅಭಿನಂದಿಸಿದರು.
ಸಹಾಯಕ ಔಷಧ ನಿಯಂತ್ರಣಾಧಿಕಾರಿ ಗುರುನಾಥ್, ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಪುರುಷೋತ್ತಮ, ಖಜಾಂಚಿ ಪ್ರಸಾದ್ ಗೌಡ, ಉಪಾಧ್ಯಕ್ಷ ಅಂಬೆಕಲ್ ವಿನೋದ್, ಸಹ ಕಾರ್ಯದರ್ಶಿ ವಸಂತ್ ಕುಮಾರ್ ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss