ಕೊಡಗು: ಕಾಂಗ್ರೆಸ್ ಪಕ್ಷದಿಂದ ನಾಲ್ವರ ಅಮಾನತು

ಹೊಸದಿಗಂತ ವರದಿ, ಮಡಿಕೇರಿ
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್’ನಿಂದ ನಾಲ್ವರನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ತಿಳಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಾದ ಗೋಣಿಕೊಪ್ಪದ ಹೆಚ್.ಬಿ.ಮುರುಘ, ಹರಿದಾಸ್ ಮಣಿ , ತಂಬಿ ಹಾಗೂ ಶ್ರೀಜಾ ಮಣಿ ಅವರುಗಳನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಿ ಪಕ್ಷದ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಆದೇಶಿಸಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗೋಣಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷರು ನೀಡಿದ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!