Thursday, August 11, 2022

Latest Posts

ಕೊಡಗು ವೈದ್ಯಕೀಯ ಕಾಲೇಜಿನಲ್ಲಿ 100 ಆಮ್ಲಜಕ ಸಹಿತ ಹಾಸಿಗೆ ಆಸ್ಪತ್ರೆ ಉದ್ಘಾಟನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ನಗರದ ಕೊಡಗು ವೈದ್ಯಕೀಯ ವಿಜ್ಞಾನ ಕಾಲೇಜಿನಲ್ಲಿ ನೂತನವಾಗಿ 100 ಹಾಸಿಗೆಯ ಡಿಸಿಎಚ್‍ಸಿ ಕೇಂದ್ರವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಭಾನುವಾರ ಸಂಜೆ ಉದ್ಘಾಟಿಸಿದರು.
ಡಿಸಿಎಚ್‍ಸಿ ಕೇಂದ್ರ ವೀಕ್ಷಣೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈಗಾಗಲೇ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ಸ್ಥಳೀಯ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಹಾಗೂ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡು ಕೋವಿಡ್ 19 ನಿಯಂತ್ರಣ ತರಲು ನಿರ್ದೇಶನ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ 2,10,603 ಆರ್‍ಟಿಪಿಸಿಆರ್ ಪರೀಕ್ಷೆ, 36,654 ರ್ಯಾಪಿಡ್ ಆಂಟಿಜನ್ ಪರೀಕ್ಷೆ ಸೇರಿದಂತೆ ಒಟ್ಟು 2,47,257 ಕೋವಿಡ್-19 ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 20,135 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಇದರಲ್ಲಿ 15,544 ಮಂದಿ ಬಿಡುಗಡೆ ಆಗಿದ್ದಾರೆ. ಹಾಗೂ 4,358 ಸಕ್ರಿಯ ಪ್ರಕರಣಗಳಿದ್ದು, 233 ಮರಣ ಪ್ರಕರಣಗಳು ವರದಿಯಾಗಿವೆ ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ಪ್ರತಿದಿನ ಸುಮಾರು 1800 ಕ್ಕಿಂತಲೂ ಅಧಿಕ ಆರ್‍ಟಿಪಿಸಿಆರ್ ಮತ್ತು ಆಂಟಿಜನ್ ಟೆಸ್ಟ್ ಮಾಡಲಾಗುತ್ತಿದೆ. ಕೋವಿಡ್ ಪರೀಕ್ಷೆ ನಡೆಸುವ ಸಲುವಾಗಿ ಜಿಲ್ಲೆಯಲ್ಲಿ 9 ಸಂಚಾರಿ ತಂಡಗಳನ್ನು ರಚಿಸಲಾಗಿದೆ ಎಂದರು.
ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ 200 ಆಕ್ಸಿಜನೇಟೆಡ್ ಬೆಡ್‍ಗಳಿಗೆ ವ್ಯವಸ್ಥೆ ಮಾಡಿಕೊಂಡಿದ್ದು, ಸುಸಜ್ಜಿತವಾದ 56 ಐ.ಸಿ.ಯು ಬೆಡ್ ಮತ್ತು 43 ವೆಂಟಿಲೇಟರ್ ಗಳನ್ನು ಹೊಂದಲಾಗಿದೆ. ಜಿಲ್ಲೆಯಲ್ಲಿ 32 ಆಂಬ್ಯುಲೆನ್ಸ್ ವಾಹನಗಳಿದ್ದು, ಗಂಟಲು/ಮೂಗು ದ್ರವ ಸಂಗ್ರಹಣೆಗಾಗಿ 5 ಹಾಗೂ ಶವ ಸಾಗಾಣಿಕೆಗಾಗಿ 4ವಾಹನಗಳನ್ನು ಮೀಸಲಿಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಗಂಭೀರ ಸ್ವರೂಪದ ಸೋಂಕಿತರ ಸೇವೆಗಾಗಿ ಹೈಟೆಕ್ ಮಾದರಿಯ ಆಂಬ್ಯುಲೆನ್ಸ್ ವಾಹನಗಳನ್ನು ಸಜ್ಜುಗೊಳಿಸಲು ಕ್ರಮವಹಿಸಲಾಗುತ್ತಿದೆ.ಜಿಲ್ಲೆಯಲ್ಲಿ 5 ಡಿಸಿಎಚ್‍ಸಿಗಳು ಸೋಂಕಿತರ ಚಿಕಿತ್ಸೆಗೆ ಲಭ್ಯವಿವೆ. ಜಿಲ್ಲಾ ಆಸ್ಪತ್ರೆಯಲ್ಲಿ 150 ಬೆಡ್‍ಗಳು, ಸೋಮವಾರಪೇಟೆ ಹಾಗೂ ವೀರಾಜಪೇಟೆ ತಾಲೂಕು ಆಸ್ಪತ್ರೆಗಳಲ್ಲಿ ತಲಾ 50 ಬೆಡ್‍ಗಳು, ಪಾಲಿಬೆಟ್ಟ 30 ಹಾಗೂ ಕುಟ್ಟದಲ್ಲಿ ತಲಾ 30 ಬೆಡ್‍ಗಳು ಸೇರಿದಂತೆ ಒಟ್ಟು 310 ಬೆಡ್‍ಗಳು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.’
ಮಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ 100 ಹಾಸಿಗೆಗಳ ಡಿ.ಸಿ.ಹೆಚ್.ಸಿಕೇಂದ್ರವನ್ನು ಉದ್ಘಾಟಿಸಲಾಗಿದ್ದು, ಇದಕ್ಕಾಗಿ 87 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಒದಗಿಸಲಾಗಿದೆ.
ಐ.ಸಿ.ಯು. ಘಟಕದಲ್ಲಿ ನವಜಾತ ಶಿಶುಗಳಿಗೆ ಹಾಗೂ ನಾನ್ ಕೋವಿಡ್ ರೋಗಿಗಳ ಡಯಾಲಿಸಿಸ್‍ಗೆ ಪ್ರತ್ಯೇಕವಾದ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ 13 ಸಾವಿರ ಲೀಟರ್ ಸಾಮಥ್ರ್ಯದ ಲಿಕ್ವಿಡ್ ಆಕ್ಸಿಜನ್ ಸಂಗ್ರಹಣಾ ಘಟಕವನ್ನು ಸ್ಥಾಪಿಸಲಾಗಿದ್ದು, ಪ್ರತಿನಿತ್ಯ ಸರಾಸರಿ 4 ಸಾವಿರ ಲೀಟರ್ ಆಮ್ಲಜನಕದ ಅವಶ್ಯವಿದೆ. ಹಾಗಾಗಿ ಒಂದೇ ಬಾರಿಗೆ 13 ಸಾವಿರ ಲೀಟರ್ ಸರಬರಾಜು ಮಾಡಿ ನಂತರ ಬಳಕೆಗೆ ಅನುಗುಣವಾಗಿ ಸರಬರಾಜು ಮಾಡಿಕೊಡಲು ಮುಖ್ಯಮಂತ್ರಿಗಳನ್ನು ಕೋರಲಾಗಿದೆ ಎಂದರು.
ಜಿಲ್ಲೆಗೆ ನಿಗದಿಯಾಗಿದ್ದ ಆಕ್ಸಿಜನ್ ಹಂಚಿಕೆ ಪ್ರಮಾಣವನ್ನು 3500 ಲೀ.ನಿಂದ 6000 ಲೀ.ಗೆ ಹೆಚ್ಚಿಸಲಾಗಿದೆ. ಇದರಿಂದ ಜಿಲ್ಲೆಗೆ ಸಾಕಷ್ಟು ಪ್ರಮಾಣದ ಆಕ್ಸಿಜನ್ ಲಭ್ಯವಾಗಲಿದೆ ಎಂದು ಸಚಿವರು ವಿವರಿಸಿದರು.
ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಅಗತ್ಯವಿರುವ ವೈದ್ಯಕೀಯ ಹಾಗೂ ಇತರೆ ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಕೋವಿಡ್ ತುರ್ತು ಕಾರ್ಯಕ್ಕೆ ನೇಮಿಸಿಕೊಂಡ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿ ಮಾಡಲು ಸೂಚಿಸಲಾಗಿದೆ.
ಹಾಲಿ ಇದ್ದ 3 ಕೋವಿಡ್ ಕೇರ್ ಸೆಂಟರ್ ಗಳ ಜೊತೆಗೆ ಹೆಚ್ಚುವರಿಯಾಗಿ 3 ಕೋವಿಡ್ ಕೇರ್ ಸೆಂಟರ್‌ ಗಳನ್ನು ತೆರೆಯಲಾಗಿದ್ದು, ಪ್ರಸ್ತುತ ಕೊಡಗು ವಿದ್ಯಾಲಯ 100 ಬೆಡ್‍ಗಳು, ನವೋದಯ ವಿದ್ಯಾಲಯ 200 ಬೆಡ್‍ಗಳು, ಕೂಡಿಗೆ 100 ಬೆಡ್‍ಗಳು, ಬಸವನಹಳ್ಳಿ 100 ಬೆಡ್‍ಗಳು, ಆರ್ಜಿ 100 ಬೆಡ್‍ಗಳು, ಬಳಗುಂದ 100 ಬೆಡ್‍ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು
ಸಚಿವರು ವಿವರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss