Monday, August 15, 2022

Latest Posts

ಕೊಡಗು| ಜು.11ರಿಂದ ಭಾರೀ ಮಳೆ ಸಂಭವ: ರೆಡ್ ಅಲರ್ಟ್ ಘೋಷಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಡಿಕೇರಿ:

ಕೊಡಗು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಅಧಿಕವಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆಯು ಜು.11ರ ಬೆಳಗ್ಗೆ 8.30ರಿಂದ 13ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಿದೆ.
ಜು.9ರ ಅಪರಾಹ್ನದಿಂದ 10ರ ಬೆಳಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಅಲ್ಲದೆ ಆಗಾಗ್ಗೆ ಹೊರಡಿಸುವ ಹವಾಮಾನ ಮುನ್ಸೂಚನೆಗಳನ್ನು ಗಮನಿಸುವಂತೆಯೂ ಕೋರಿದೆ.
ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ 24*7 ಕಂಟ್ರೋಲ್ ರೂಂ ಸಂಖ್ಯೆ 08272221077 ಅಥವಾ ವಾಟ್ಸ್‍ಆಪ್ 8550001077ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss