ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಸಂಭ್ರಮಕ್ಕೆ ಸಜ್ಜಾಗುತ್ತಿದೆ ಕೊಡಗು!

ಹೊಸದಿಗಂತ ವರದಿ, ಮಡಿಕೇರಿ:
ರಾಜ್ಯ ಮಟ್ಟದ ಮುಕ್ತ‌ ಕೆಸರುಗದ್ದೆ ಕ್ರೀಡಾಕೂಟ ಹಾಗೂ ಆಟೋಟ ಸ್ಪರ್ಧೆಗಳು ಜು.23ರಂದು ಇಲ್ಲಿಗೆ ಸಮೋಪದ ಕಗ್ಗೋಡ್ಲುವಿನಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಷನ್ ಆಫ್ ಇಂಡಿಯಾದ ಮಡಿಕೇರಿ ಘಟಕ, ಕೊಡಗು ಜಿಲ್ಲಾ ಯುವ ಒಕ್ಕೂಟ ವೀರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ ಹಾಗೂ ಕಗ್ಗೋಡ್ಲು ಕಾವೇರಿ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ, ಕಗ್ಗೋಡ್ಲು ಗ್ರಾಮದ ಪಡನೋಳಂಡ ಬೋಪಣ್ಣ ಕುಶಾಲಪ್ಪ ಅವರ ಗದ್ದೆಯಲ್ಲಿ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಜರುಗಲಿವೆ.
ರಾಜ್ಯ ಮಟ್ಟದ 30ನೇ ವರ್ಷದ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟಗಳಲ್ಲಿ ಸಾರ್ವಜನಿಕ ಪುರುಷರ ವಿಭಾಗ ಮತ್ತು ಮಹಿಳೆಯರ ವಿಭಾಗದ ಹಗ್ಗ ಜಗ್ಗಾಟ (9 ಜನರ ತಂಡ), ವಾಲಿಬಾಲ್ ಸಾರ್ವಜನಿಕ ಪುರುಷರ ವಿಭಾಗ (4 ಜನರ ತಂಡ), ಥ್ರೋಬಾಲ್ ಸಾರ್ವಜನಿಕ ಮಹಿಳೆಯರ ವಿಭಾಗ(6 ಜನರ ತಂಡ) ಕ್ರೀಡೆಗಳು ನಡೆಯಲಿವೆ.
ಕೆಸರು ಗದ್ದೆ ಓಟದ ಸ್ಪರ್ಧೆಯಲ್ಲಿ ಕಿರಿಯ ಪ್ರಾಥಮಿಕ ಶಾಲಾ ಬಾಲಕರಿಗೆ ಮತ್ತು ಬಾಲಕಿಯರಿಗೆ 50 ಮೀ., ಹಿರಿಯ ಪ್ರಾಥಮಿಕ ಶಾಲಾ ಬಾಲಕರಿಗೆ ಮತ್ತು ಬಾಲಕಿಯರಿಗೆ 100 ಮೀ., ಪ್ರೌಢ ಶಾಲಾ ಬಾಲಕರಿಗೆ ಮತ್ತು ಬಾಲಕಿಯರಿಗೆ 200 ಮೀ., ಪದವಿಪೂರ್ವ ಕಾಲೇಜು ಬಾಲಕರಿಗೆ ಮತ್ತು ಬಾಲಕಿಯರಿಗೆ 400 ಮೀ.ಓಟ, 40 ವರ್ಷ ಮೇಲ್ಪಟ್ಟ ಪುರುಷರಿಗೆ ಮತ್ತು ಮಹಿಳೆಯರಿಗೆ 300 ಮೀ. ಓಟ. ಸಾರ್ವಜನಿಕ ಪುರುಷರಿಗೆ ಮತ್ತು ಮಹಿಳೆಯರಿಗೆ ಮುಕ್ತ ಓಟ ಹಾಗೂ ಕಗ್ಗೋಡ್ಲು ಗ್ರಾಮಸ್ಥರಿಗೆ ಸಾಂಪ್ರದಾಯಿಕ ನಾಟಿ ಓಟದ ಸ್ಪರ್ಧೆಗಳು ನಡೆಯಲಿವೆ.
ಹೆಚ್ಚಿನ ಮಾಹಿತಿಗೆ ಪಿ.ಪಿ.ಸುಕುಮಾರ್ ಅಧ್ಯಕ್ಷರು ಕೊಡಗು ಜಿಲ್ಲಾ ಯುವ ಒಕ್ಕೂಟ ಮಡಿಕೇರಿ- 9481213920, ಬಾಳಡಿ ದಿಲೀಪ್ ಕುಮಾರ್, ಅಧ್ಯಕ್ಷರು, ತಾಲೂಕು ಯುವ ಒಕ್ಕೂಟ ಮಡಿಕೇರಿ-9480674546, ಎ.ಆರ್ ನೇತ್ರಾವತಿ ಕಾರ್ಯದರ್ಶಿ, ತಾಲೂಕು ಯುವ ಒಕ್ಕೂಟ ಮಡಿಕೇರಿ-9449679460, ಕೆ.ಕೆ.ಗಣೇಶ್, ಕಾರ್ಯದರ್ಶಿ, ಕೊಡಗು ಜಿಲ್ಲಾ ಯುವ ಒಕ್ಕೂಟ ಮಡಿಕೇರಿ- 9449759029, ಕೂಡಂಡ ಸಾಬ ಸುಬ್ರಮಣಿ ಸದಸ್ಯರು, ತಾಲೂಕು ಯುವ ಒಕ್ಕೂಟ ಮಡಿಕೇರಿ-9845571290 ಇವರನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್.ಗುರುಸ್ವಾಮಿ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!